ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಪಂಜಾಬ್ ಸರ್ಕಾರ
ಪಂಜಾಬ್ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಅಡಿಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಅವರ ಸಂಬಳವನ್ನು ಪಾವತಿಸಲಾಗುವುದಿಲ್ಲ ಎಂದು ಹೇಳಿದೆ.
Published: 22nd December 2021 08:56 PM | Last Updated: 22nd December 2021 08:56 PM | A+A A-

ಸಂಗ್ರಹ ಚಿತ್ರ
ಚಂಡೀಗಢ: ಪಂಜಾಬ್ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಅಡಿಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಅವರ ಸಂಬಳವನ್ನು ಪಾವತಿಸಲಾಗುವುದಿಲ್ಲ ಎಂದು ಹೇಳಿದೆ.
ಉದ್ಯೋಗಿಗಳು ತಮ್ಮ ಸಂಬಳವನ್ನು ಪಡೆಯಲು ಪಂಜಾಬ್ ಸರ್ಕಾರದ ಜಾಬ್ ಪೋರ್ಟಲ್‌ನಲ್ಲಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ.
ದೇಶಾದ್ಯಂತ ಕೊರೊನಾ ವೈರಸ್ ರೂಪಾಂತರದ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪಂಜಾಬ್ ಸರ್ಕಾರವು ಲಸಿಕೆಯನ್ನು ಪಡೆಯಲು ಜನರನ್ನು ಉತ್ತೇಜಿಸಲು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.
ಈ ನಡುವೆ, ಕೋವಿಡ್ -19 ವಿರುದ್ಧ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಳ್ಳದ ಜನರನ್ನು ಜನವರಿ 1 ರ ನಂತರ ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿಸಲಾಗುವುದಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಬುಧವಾರ ಹೇಳಿದ್ದಾರೆ.
ಭಾರತವು ಇಲ್ಲಿಯವರೆಗೆ ಹೊಸ ರೂಪಾಂತರದ 200ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದೆ. ಇದು ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನ 213 ಒಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ದೆಹಲಿಯು 57 ದೃಢೀಕೃತ ಪ್ರಕರಣಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಮಹಾರಾಷ್ಟ್ರ (54 ಪ್ರಕರಣಗಳು) ಮತ್ತು ತೆಲಂಗಾಣ (24 ಪ್ರಕರಣಗಳು).