ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ವಿರುದ್ಧ ಅರ್ಜಿ: ಕೇರಳ ಹೈಕೋರ್ಟ್ ನಿಂದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ

ತುರ್ತಾಗಿ ಇತ್ಯರ್ಥ ಆಗಬೇಕಿರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ, ಅದರ ಮಧ್ಯೆ ಇಂಥಾ ಕ್ಷುಲ್ಲಕ ಅರ್ಜಿಗಳು ನ್ಯಾಯಾಲಯದ ಸಮಯ ವ್ಯರ್ಥ ಮಾಡುತ್ತಿವೆ.
ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್

ಕೊಚ್ಚಿ: ಲಸಿಕೆ ಪ್ರಮಾಣಪತ್ರದ ಮೇಲೆ ಪ್ರಧಾನಿ ಮೋದಿ ಚಿತ್ರ ಅಚ್ಚು ಹಾಕಿರುವುದರ ವಿರುದ್ಧ ಅರ್ಜಿ ಸಲ್ಲಿಸಿದ್ದ ಹಿರಿಯ ನಾಗರಿಕರೋರ್ವರಿಗೆ ಕೇರಳ ಉಚ್ಛನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿದೆ. 

ಈ ಸಂಬಂಧ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ ಅರ್ಜಿದಾರರ ಉದ್ದೇಶ ಕ್ಷುಲ್ಲಕ ಎಂದು ಅಭಿಪ್ರಾಯಪಟ್ಟಿದೆ. ಲಸಿಕೆ ಪ್ರಮಾಣಪತ್ರದ ಮೇಲೆ ಪ್ರಧಾನಿ ಚಿತ್ರ ಇರುವುದು ತಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ಅರ್ಜಿದಾರರು ಅರ್ಜಿಯಲ್ಲಿ ತಿಳಿಸಿದ್ದರು.

ಈ ಸಂದರ್ಭ ಅತ್ಯಂತ ತುರ್ತಾಗಿ ಇತ್ಯರ್ಥ ಆಗಬೇಕಿರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ, ಅದರ ಮಧ್ಯೆ ಇಂಥಾ ಕ್ಷುಲ್ಲಕ ಅರ್ಜಿಗಳು ನ್ಯಾಯಾಲಯದ ಸಮಯ ವ್ಯರ್ಥ ಮಾಡುತ್ತಿವೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com