ಅಸ್ಸಾಂ: 3 ಅಪ್ರಾಪ್ತರ ಮೇಲೆ ಅತ್ಯಾಚಾರ ಎಸಗಿದ ಆರೋಪಿ; ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡು
ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಸಂಬಂಧ 50 ವರ್ಷದ ವ್ಯಕ್ತಿಯನ್ನು ಬಂಧಿಸಲು ಮುಂದಾದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
Published: 23rd December 2021 03:16 PM | Last Updated: 23rd December 2021 03:16 PM | A+A A-

ಸಂಗ್ರಹ ಚಿತ್ರ
ಗುವಾಹಟಿ: ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಸಂಬಂಧ 50 ವರ್ಷದ ವ್ಯಕ್ತಿಯನ್ನು ಬಂಧಿಸಲು ಮುಂದಾದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಬುಧವಾರ ಮಧ್ಯರಾತ್ರಿ ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಆರೋಪಿ ರಜನಿ ಕಾಂತಾ ಡೈಮರಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯ ಸಮಯದಲ್ಲಿ ಆತನನ್ನು ಅವರ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಆಗ ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿಯ ಕಾಲಿಗೆ ಬುಲೆಟ್ ಗಾಯಗಳಾಗಿದ್ದು, ಗುವಾಹಟಿಯ ಗೌಹಾಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣ ದಾಖಲಾಗಿದ್ದು, ಸಂತ್ರಸ್ತರನ್ನು ಪರೀಕ್ಷಿಸಿದಾಗ ನಾಲ್ಕನೇ ಸಂತ್ರಸ್ತೆ ಇರುವುದು ಬೆಳಕಿಗೆ ಬಂದಿದೆ ಎಂದು ಮೊರಿಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಅಪರ್ಣಾ ಎನ್ ಹೇಳಿದ್ದಾರೆ.
'ನಾಲ್ಕನೇ ಸಂತ್ರಸ್ತೆ ಬಗ್ಗೆ ತನ್ನ ವಿಚಾರಣೆಯ ಸಮಯದಲ್ಲಿ, ಆರೋಪಿ ಸಂತ್ರಸ್ತೆಯ ಒಳಉಡುಪನ್ನು ತನ್ನ ಮನೆಯಲ್ಲಿ ಇಟ್ಟಿದ್ದಾಗಿ ತಿಳಿಸಿದನು. ಅದನ್ನು ಮರುಪಡೆಯಲು, ಪೊಲೀಸರ ತಂಡವು ಆರೋಪಿಯನ್ನು ಸ್ಥಳಕ್ಕೆ ಕರೆದೊಯ್ಯುತ್ತಿದ್ದರು ಎಂದು ಅಪರ್ಣಾ ಹೇಳಿದರು.
ಇದಕ್ಕೂ ಮೊದಲು, ಮೂವರು ಸಂತ್ರಸ್ತರ ಕುಟುಂಬಗಳು ಎಫ್‌ಐಆರ್ ದಾಖಲಿಸಿದ ನಂತರ, ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.