ಕಾಶ್ಮೀರ: ಶ್ರೀನಗರದಲ್ಲಿ ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ, ಓರ್ವ ನಾಗರಿಕ ಬಲಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಸಂಜೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಪೊಲೀಸ್‌ ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ) ಮತ್ತು ಒಬ್ಬ ನಾಗರಿಕ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಸಂಜೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಪೊಲೀಸ್‌ ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ) ಮತ್ತು ಒಬ್ಬ ನಾಗರಿಕ ಮೃತಪಟ್ಟಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ನ ಬಿಜ್‌ಬೆಹರಾದಲ್ಲಿ ಎಎಸ್‌ಐ ಮೊಹಮ್ಮದ್ ಅಶ್ರಫ್ ಅವರ ಮೇಲೆ ಉಗ್ರರು ಪಾಯಿಂಟ್ ಬ್ಲಾಂಕ್ ರೇಂಜ್‌ನಿಂದ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ದಾಳಿಯ ನಂತರ ಉಗ್ರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು, ಸಿಆರ್‌ಪಿಎಫ್ ಮತ್ತು ಸೇನಾ ಸಿಬ್ಬಂದಿ ತಕ್ಷಣ ದಾಳಿ ನಡೆದ ಪ್ರದೇಶಕ್ಕೆ ಧಾವಿಸಿದ್ದು, ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಈ ದಾಳಿಗೂ ಅರ್ಧಗಂಟೆಯ ಮುನ್ನ ಶ್ರೀನಗರದ ಈದ್ಗಾದ ಮೆರ್ಜಾನ್‌ಪೋರಾ ಪ್ರದೇಶದಲ್ಲಿ ಉಗ್ರರು ಯುವಕ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ರೌಫ್ ಅಹ್ಮದ್ ಅವರನ್ನು ಕೂಡಲೇ ಎಸ್‌ಎಂಎಚ್‌ಎಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com