ಆದಿತ್ಯ ಠಾಕ್ರೆ
ಆದಿತ್ಯ ಠಾಕ್ರೆ

ಬೆಂಗಳೂರಿನಿಂದ ಆದಿತ್ಯ ಠಾಕ್ರೆಗೆ ಜೀವ ಬೆದರಿಕೆ ಸಂದೇಶ: ವ್ಯಕ್ತಿಯ ಬಂಧನ

ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆಗೆ ಬೆಂಗಳೂರಿನಿಂದ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಕ್ರೈಮ್ ಬ್ರಾಂಚ್ ನ ಸೈಬರ್ ಘಟಕದ ಪೊಲೀಸರು ಬಂಧಿಸಿದ್ದಾರೆ. ಜೈಸಿಂಗ್ ರಜಪೂತ್ ಬಂಧಿತ ವ್ಯಕ್ತಿಯಾಗಿದ್ದಾನೆ.

ಮುಂಬೈ: ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆಗೆ ಬೆಂಗಳೂರಿನಿಂದ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಕ್ರೈಮ್ ಬ್ರಾಂಚ್ ನ ಸೈಬರ್ ಘಟಕದ ಪೊಲೀಸರು ಬಂಧಿಸಿದ್ದಾರೆ. ಜೈಸಿಂಗ್ ರಜಪೂತ್ ಬಂಧಿತ ವ್ಯಕ್ತಿಯಾಗಿದ್ದಾನೆ.

ಜೈಸಿಂಗ್ ರಜಪೂತ್ ಡಿಸೆಂಬರ್ 8 ರಂದು ಠಾಕ್ರೆ ಅವರಿಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ನಂತರ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದರು ಮುಂಬೈ ಪೊಲೀಸರು ತಿಳಿಸಿದ್ದಾರೆ.

ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಹತ್ಯೆಗೆ ಸಂಬಂಧಿಸಿದ ಸಂಘಟನೆಗಳಿಂದ ಆದಿತ್ಯ ಠಾಕ್ರೆಗೆ ಜೀವ ಬೆದರಿಕೆ ಸಂದೇಶ ಕಳುಹಿಸಲಾಗಿತ್ತೆ ಎಂಬುದರ ಬಗ್ಗೆ ಶಂಕಿಸಿದ್ದೇವು. ನನಗೂ ಈ ರೀತಿಯ ಬೆದರಿಕೆ ಬಂದಿದೆ. ಇದರ ಬಗ್ಗೆ ತನಿಖೆಗೆ ಪತ್ರ ಬರೆದಿದ್ದೇವೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಹೇಳಿದ್ದಾರೆ. 

ಇದೊಂದು ಗಂಭೀರ ವಿಚಾರವಾಗಿದೆ. ಅಧಿಕಾರ ಕಳೆದುಕೊಂಡ ನಂತರ ಕೆಲ ಸಂಘಟನೆಗಳು ಈ ರೀತಿಯಲ್ಲಿ ವರ್ತಿಸುತ್ತಿವೆ. ಗೃಹ ಇಲಾಖೆ ತನಿಖೆ ನಡೆಸಲಿದ್ದು, ಇದರ ಹಿಂದಿರುವವರನ್ನು ಕಂಡುಹಿಡಿಯಲಿದೆ. ಅವರನ್ನು ಹುಡುಕಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com