ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಬಿಜೆಪಿ ನಾಯಕರ ಸಂಬಂಧಿಕರಿಂದ ಭೂಕಬಳಿಕೆ ಆರೋಪ: ತನಿಖೆಗೆ ಆದೇಶಿಸಿದ ಯೋಗಿ ಸರ್ಕಾರ

ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ?- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಿತವಾಗುತ್ತಿರುವ ರಾಮ ಮಂದಿರದ ಬಳಿ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧಿಕರು ಭೂಮಿಯನ್ನು ಕಬಳಿಸಿದ್ದಾರೆ ಎಂಬ ವದಂತಿಯ ತನಿಖೆಗೆ ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ, ರಾಮ ಮಂದಿರ ನಿರ್ಮಾಣ ಕುರಿತು ಇದ್ದ ವಿವಾದಕ್ಕೆ ತೆರೆಬಿದ್ದ ನಂತರ ಶಾಸಕರು, ಮೇಯರ್‍ಗಳು, ಆಯುಕ್ತರ ಸಂಬಂಧಿಕರು, ಎಸ್‍ಡಿಎಂ ಮತ್ತು ಡಿಐಜಿ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ವದಂತಿ ಹರಡಿತ್ತು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಇದೇ ವಿಷಯ ಪ್ರಸ್ತಾಪಿಸಲು ಪ್ರಯತ್ನಿಸಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಇದನ್ನು “ಭೂ ಹಗರಣ” ಎಂದು ಕರೆದರು.

'ಗೌರವಾನ್ವಿತ ಮೋದಿಜಿ, ಈ ಬಹಿರಂಗ ಲೂಟಿಯ ಬಗ್ಗೆ ನೀವು ಯಾವಾಗ ಮಾತನಾಡುತ್ತೀರಾ? ಕಾಂಗ್ರೆಸ್ ಪಕ್ಷ, ದೇಶದ ಜನರು ಮತ್ತು ರಾಮಭಕ್ತರು ಈ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದು ದೇಶದ್ರೋಹವಲ್ಲವೇ? ಇದು ದೇಶದ್ರೋಹಕ್ಕಿಂತ ಕಡಿಮೆಯೇ?' ಎಂದು ಅವರು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com