ತಮಿಳುನಾಡು: ನೀಟ್ ಪರೀಕ್ಷೆಯಲ್ಲಿ ಅನುತೀರ್ಣ, ಮನನೊಂದು ಯುವತಿ ಆತ್ಮಹತ್ಯೆಗೆ ಶರಣು

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಅನುತ್ತೀರ್ಣಗೊಂಡ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೀಲಗಿರಿ ಜಿಲ್ಲೆಯ ಗುದಲೂರ್ ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚೆನ್ನೈ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಅನುತ್ತೀರ್ಣಗೊಂಡ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೀಲಗಿರಿ ಜಿಲ್ಲೆಯ ಗುದಲೂರ್ ನಲ್ಲಿ ನಡೆದಿದೆ.

ಯುವತಿ ಡಿಸೆಂಬರ್ 17 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ವಿಷ ಸೇವಿಸಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ನೋಡಿದ ನೆರಹೊರೆಯವರು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಮೆಟ್ಟುಪಾಳ್ಯಂ ಆಸ್ಪತ್ರೆಯೊಂದಕ್ಕೆ ರವಾನಿಸಲಾಗಿದ್ದು, ಅಲ್ಲಿ ಗುರುವಾರ ಮೃತಪಟ್ಟಿದ್ದಾಳೆ.

ಯುವತಿ ಬರೆದಿದ್ದ ಸೂಸೈಡ್ ನೋಟ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೀಟ್ ನಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ನಿರಾಸೆಗೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಎರಡೂ ಬಾರಿ ನೀಟ್ ಪರೀಕ್ಷೆ ಬರೆದಿದ್ದಳು. ಆದರೆ, ಪರೀಕ್ಷೆಯಲ್ಲಿ ಯಶಸ್ಸು ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com