ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಅಮಿತ್ ಶಾ; ಸರ್ಕಾರದಿಂದ ವರದಿ ಕೇಳಿದ ಎಂಎಚ್ಎ

ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.
ಲೂದಿಯಾನ ಕೋರ್ಟ್ ಸ್ಫೋಟದ ಘಟನಾ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ
ಲೂದಿಯಾನ ಕೋರ್ಟ್ ಸ್ಫೋಟದ ಘಟನಾ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ

ನವದೆಹಲಿ: ಲೂಧಿಯಾನ ಕೋರ್ಟ್ ಬಳಿ ಸ್ಫೋಟ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.

ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಬಗ್ಗೆ ಹಾಗೂ ರಾಜ್ಯದ ಪರಿಸ್ಥಿತಿಯ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ. 

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಗೃಹ ಸಚಿವಾಲಯ ಸ್ಫೋಟದ ಬಗ್ಗೆ ಪಂಜಾಬ್ ಸರ್ಕಾರದಿಂದ ವರದಿ ಕೇಳಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಹಂತದ ತನಿಖೆಯ ಮಾಹಿತಿಯ ಅಂಶಗಳ ಬಗ್ಗೆ ಮಾಹಿತಿ ನೀಡುವಂತೆ ಎಂಎಚ್ಎ ಸರ್ಕಾರವನ್ನು ಕೇಳಿದೆ. ಘಟನಾ ಸ್ಥಳಕ್ಕೆ ಎನ್ಎಸ್ ಜಿ ಭೇಟಿ ನೀಡಿದ್ದು ಫೋರೆನ್ಸಿಕ್ ವಿಶ್ಲೇಷಣೆಯನ್ನು ನಡೆಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com