ಓಮಿಕ್ರಾನ್ ಹೆಚ್ಚಳ: ಗುಜರಾತ್, ಉತ್ತರ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಬಳಿಕ ಈಗ ಮಹಾರಾಷ್ಟ್ರದಲ್ಲೂ ನಿರ್ಬಂಧ ಜಾರಿ

ಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ 20 ಕ್ಕಿಂತಲೂ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. 
ಮುಂಬೈ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು
ಮುಂಬೈ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು

ಮುಂಬೈ: ಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ 20 ಕ್ಕಿಂತಲೂ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. 

ಹೊಸ ರೂಪಾಂತರಿ ಸೋಂಕು ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ರಾತ್ರಿ 9 ಗಂಟೆ ನಂತರ ಬೆಳಿಗ್ಗೆ 6 ಗಂಟೆ ವರೆಗೆ 5 ಕ್ಕೂ ಹೆಚ್ಚಿನ ಮಂದಿ ಒಂದೆಡೆ ಸೇರುವುದನ್ನು ನಿರ್ಬಂಧಿಸಲಾಗಿದೆ. ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಡಿ.24 ರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದೇ ವೇಳೆ ಗುಜರಾತ್, ಮಧ್ಯಪ್ರದೇಶ, ಹರ್ಯಾಣ, ಉತ್ತರ ಪ್ರದೇಶ ರಾಜ್ಯಗಳೂ ಓಮಿಕ್ರಾನ್ ಸೋಂಕು ತಡೆಗೆ ನೈಟ್ ಕರ್ಫ್ಯೂ ಕ್ರಮದ ಮೊರೆ ಹೋಗಿವೆ. ಗುಜರಾತ್ ನ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ. ಅಹಮದಾಬಾದ್, ವಡೋದರಾ, ಸೂರತ್, ರಾಜ್ ಕೋಟ್, ಭವ್ ನಗರ್, ಜಾಮ್ ನಗರ, ಗಾಂಧಿನಗರ, ಜುನಾಗಢ್ ಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಗುರುವಾರ ಒಂದೇ ದಿನದಂದು ಗುಜರಾತ್ ನಲ್ಲಿ 7 ಹೊಸ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದವು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com