ಬೂಸ್ಟರ್ ಡೋಸ್ ನೀಡಿಕೆ: ಕೇಂದ್ರ ಸರ್ಕಾರ ನನ್ನ ಸಲಹೆಯನ್ನು ಒಪ್ಪಿಕೊಂಡಿದೆ: ರಾಹುಲ್ ಗಾಂಧಿ

ದೇಶದ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಕುರಿತ ನನ್ನ ಸಲಹೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ದೇಶದ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಕುರಿತ ನನ್ನ ಸಲಹೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನಿನ್ನೆಯಷ್ಟೇ ಪ್ರಧಾನಿ ಮೋದಿ ದೇಶದ ನಾಗರೀಕರಿಗೆ ಬೂಸ್ಟರ್ ಡೋಸ್ ಮತ್ತು ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಮಹತ್ವದ ಘೋಷಣೆ ಮಾಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಘೋಷಣೆ ಹಿಂದೆ ತಮ್ಮ ಸಲಹೆ ಇತ್ತು ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, 'ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಹೆಚ್ಚುವರಿ ಡೋಸ್ (ಬೂಸ್ಟರ್‌ ಡೋಸ್​) ನೀಡಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಸ್ವಾಗತಾರ್ಹ. ಬೂಸ್ಟರ್ ಡೋಸ್‌ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಮನವಿ ಮಾಡಿದ್ದೆ. ನನ್ನ ಸಲಹೆಯನ್ನು ಸರ್ಕಾರ ಒಪ್ಪಿಕೊಂಡಿದೆ. ಇದು ಸರಿಯಾದ ಹೆಜ್ಜೆ, ದೇಶದ ಜನರ ಸುರಕ್ಷತೆ ಸರ್ಕಾರದ ಹೊಣೆ ಎಂದಿದ್ದಾರೆ.

ದೇಶದಲ್ಲಿ ಕೋವಿಡ್​-19 ಪ್ರಕರಣಗಳ ಜೊತೆಗೆ ಓಮಿಕ್ರಾನ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್​ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಘೋಷಣೆ ಮಾಡಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com