
ನವದೆಹಲಿಯ ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ರೀತಿಯ ಏರಿಕೆ ಹಿನ್ನೆಲೆಯಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಸೋಮವಾರದಿಂದ ರಾತ್ರಿ ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ದೆಹಲಿ ಸರ್ಕಾರ ಭಾನುವಾರ ತಿಳಿಸಿದೆ.
ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 290 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. 120 ಸೋಂಕಿತರು ಗುಣಮುಖರಾಗಿದ್ದು, ಸದ್ಯ 1,103 ಸಕ್ರಿಯ ಪ್ರಕರಣಗಳಿರುವುದಾಗಿ ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ.
#COVID19 | Delhi reports 290 positive cases, one death, and 120 recoveries in the last 24 hours. Active cases 1,103 pic.twitter.com/iDM9ryYmg3
— ANI (@ANI) December 26, 2021