ಕೃಷಿ ಕಾಯ್ದೆ ವಾಪಸ್ ತರುವ ಹೇಳಿಕೆ ನೀಡಿಯೇ ಇಲ್ಲ: ಯೂಟರ್ನ್ ಹೊಡೆದ ಕೇಂದ್ರ ಸಚಿವ ತೋಮರ್

ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ನವದೆಹಲಿ: ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಈ ಹಿಂದೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೋಮರ್, ಮತ್ತೆ ತಿದ್ದುಪಡಿಗಳೊಂದಿಗೆ ಕೃಷಿ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದ್ದರು. 'ಕೃಷಿ ಕಾನೂನುಗಳ ರದ್ದತಿಗೆ "ಕೆಲವು ಜನರು ಕಾರಣ". ಸಂಸತ್ತಿನಲ್ಲಿ ಚರ್ಚೆಯ ಕೊರತೆಯೊಂದಿಗೆ ಆ ಮಹತ್ವದ ಕಾಯ್ದೆಗಳನ್ನು ರದ್ದುಗೊಳಿಸಲಾಯಿತು. ದೇಶಕ್ಕೆ ಸ್ವತಂತ್ರ್ಯ ಬಂದ 70 ವರ್ಷಗಳ ಬಳಿಕ ಕೃಷಿ ವಿಭಾಗದ ಸರ್ವತೋಮುಖ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಕ್ರಾಂತಿಕಾರಿ ಕಾನೂನು ತರಲು ಮುಂದಾಗಿತ್ತು. ಇದು ಕೆಲ ಪಟ್ಟಭದ್ರ ಹಿತಾಸಕ್ತಿಗಳಿಗೆ ಹಿಡಿಸಲಿಲ್ಲ. ಹೀಗಾಗಿ ಕಾಯ್ದೆಗಳ ಕುರಿತು ಅಪಪ್ರಚಾರ ಮಾಡಿ ಅವುಗಳ ವಿರುದ್ಧ ಪ್ರತಿಭಟಿಸುವಂತೆ ಮಾಡಿದರು. ಆದರೆ ಅವರಿಗೆ ನೆನಪಿರಲಿ.. ಸರ್ಕಾರ ಇದರಿಂದ ನಿರಾಶೆಗೊಂಡಿಲ್ಲ. ನಾವು ಒಂದು ಹೆಜ್ಜೆ ಹಿಂದಕ್ಕೆ ಹೋಗಿರಬಹುದು. ಆದರೆ ಅದಕ್ಕಿಂತ ವೇಗದಲ್ಲಿ ಮತ್ತೆ ಮುನ್ನುಗ್ಗುತ್ತೇವೆ.  ನಾವು ಖಂಡಿತಾ ಮತ್ತೆ ಮುಂದುವರಿಯುತ್ತೇವೆ ಏಕೆಂದರೆ ರೈತರು ದೇಶದ ಬೆನ್ನೆಲುಬು ಎಂದು ಹೇಳಿದ್ದರು.

ಈ ಹೇಳಿಕೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ರೈತಾಪಿ ವಲಯದಲ್ಲಿ ವ್ಯಾಪಕ ವಿರೋಧಕ್ಕೂ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ತಾವು ಆ ರೀತಿ ಹೇಳಿಕೆಯನ್ನೇ ನೀಡಿಲ್ಲ. ಇವೆಲ್ಲಾ ಕೇವಲ ಅಪಪ್ರಚಾರ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com