ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಐಎಸ್'ಜೆಕೆ ಉಗ್ರನ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಆ್ಯಂಡ್ ಕಾಶ್ಮೀರ್ (ಐಎಸ್'ಜೆಕೆ) ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಆ್ಯಂಡ್ ಕಾಶ್ಮೀರ್ (ಐಎಸ್'ಜೆಕೆ) ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರ ಎಂಬ ಪ್ರದೇಶದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್-ಜನರಲ್ ಮಾಹಿತಿ ನೀಡಿರುವ ಪ್ರಕಾರ, ಮೃತ ಉಗ್ರನನ್ನು ಕಡಿಪೋರಾ ಪ್ರದೇಶದ ನಿವಾಸಿ ಫಹೀಂ ಭಟ್ ಎಂದು ಗುರುತಿಸಲಾಗಿದ್ದು, ಈತ ಬಿಜ್‌ಬೆಹರಾ ಪೊಲೀಸ್ ಠಾಣೆಯ ಎಎಸ್‌ಐ ಮೊಹಮ್ಮದ್ ಅಶ್ರಫ್ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com