ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೇರಳದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್! ಡಿಸೆಂಬರ್ 30 ರಿಂದ ರಾತ್ರಿ ಕರ್ಫ್ಯೂ ಜಾರಿ

ಕೇರಳದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ತಡೆಯುವ ನಿಟ್ಟಿನಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರಗೂ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. 

ತಿರುವನಂತಪುರ: ಕೇರಳದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ತಡೆಯುವ ನಿಟ್ಟಿನಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರಗೂ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. 

ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದಲ್ಲಿ ಸೋಮವಾರ ನಡೆದ ಕೋವಿಡ್ ಪರಾಮರ್ಶನಾ ಸಭೆಯಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರೆಗೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ರಾತ್ರಿಯಲ್ಲಿ ನಿರ್ಬಂಧಿ ವಿಧಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ ಹೊಸ ವರ್ಷಾಚರಣೆಗೆ ಅವಕಾಶ ನೀಡದಿರುವ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಬಾರ್ ಗಳು, ಕ್ಲಬ್ ಗಳು, ಹೋಟೆಲ್ ಗಳು, ರೆಸ್ಟೋರೆಂಟ್ ಗಳಲ್ಲಿ ಶೇಕಡಾ 50 ರಷ್ಟು ಆಸನ ಭರ್ತಿಗಷ್ಟೇ ಅವಕಾಶ ನೀಡಲಾಗಿದೆ.

ಹೊಸ ವರ್ಷಾಚರಣೆ ವೇಳೆ ಹೆಚ್ಚು ಜನ ಸೇರದಂತೆ ಬೀಚ್ ಗಳು, ಶಾಫಿಂಗ್ ಮಾಲ್ ಗಳು, ಸಾರ್ವಜನಿಕ ಪಾರ್ಕ್ ಗಳಂತಹ ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳ ಬೆಂಬಲದೊಂದಿಗೆ ಜಿಲ್ಲಾಧಿಕಾರಿಗಳು ವಲಯದ ಮ್ಯಾಜಿಸ್ಟ್ರೇಟರ್ ಗಳನ್ನು ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೇರಳದಲ್ಲಿ ಸೋವಾರ  1,636 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 52,24,929ಕ್ಕೆ ಏರಿಕೆಯಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com