ಉತ್ತರ ಪ್ರದೇಶ: ರೈಲಿನಲ್ಲಿ ಪ್ರಯಾಣಿಸುವ ಮೂಲಕ ಕಾನ್ಪುರ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶದ ಕಾನ್ಪುರ ಮೆಟ್ರೋ ರೈಲು ಯೋಜನೆಯ ಪೂರ್ಣಗೊಂಡ ಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದರು.
ಮೆಟ್ರೋದಲ್ಲಿ ಪ್ರಧಾನಿ ಮೋದಿ
ಮೆಟ್ರೋದಲ್ಲಿ ಪ್ರಧಾನಿ ಮೋದಿ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಮೆಟ್ರೋ ರೈಲು ಯೋಜನೆಯ ಪೂರ್ಣಗೊಂಡ ಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದರು.

ಸದ್ಯ ಪೂರ್ಣಗೊಂಡ 9 ಕಿಮೀ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಪ್ರಧಾನಿ, ಬಳಿಕ ಐಐಟಿ ಕಾನ್ಪುರ ಮೆಟ್ರೋ ನಿಲ್ದಾಣದಿಂದ ಗೀತಾ ನಗರದವರೆಗೆ ರೈಲಿನಲ್ಲಿ 10 ನಿಮಿಷಗಳ ಕಾಲ ಪ್ರಯಾಣ ಮಾಡಿದರು.

ಈ ಪ್ರಯಾಣಕ್ಕಾಗಿ ಅವರು ಟಿಕೆಟ್​ ಕೂಡ ಖರೀದಿ ಮಾಡಿದ್ದಾರೆ. ಈ ವೇಳೆ ಪ್ರಧಾನಿಯೊಂದಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್​ ಸಿಂಗ್​ ಪುರಿ ಸಹ ಇದ್ದರು.

ಕಾನ್ಪುರ ಮೆಟ್ರೋ ರೈಲು ಯೋಜನೆಯು ಎರಡು ಕಾರಿಡಾರ್‌ಗಳನ್ನು ಒಳಗೊಂಡಿದ್ದು, ಒಟ್ಟು 32.5 ಕಿಮೀ ಉದ್ದವನ್ನು ಹೊಂದಿದೆ.

ಐಐಟಿ-ಕಾನ್ಪುರದಿಂದ ನೌಬಸ್ತಾದವರೆಗಿನ ಮೊದಲ ಕಾರಿಡಾರ್ 23.8 ಕಿಮೀ ಉದ್ದವಿದ್ದರೆ, ಚಂದ್ರಶೇಖರ್ ಆಜಾದ್ ಕೃಷಿ ವಿಶ್ವವಿದ್ಯಾಲಯದಿಂದ ಬಾರ್ರಾ-8 ವರೆಗಿನ ಎರಡನೇ ಕಾರಿಡಾರ್ 8.6 ಕಿಮೀ ಉದ್ದವಿದೆ.

ಬುಧವಾರದಿಂದ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮೆಟ್ರೋ ಸೇವೆ ಲಭ್ಯವಿರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com