ಗುಜರಾತ್: ಜೀವಾವಧಿ ಶಿಕ್ಷೆ ವಿಧಿಸಿದಕ್ಕೆ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಹಿನ್ನೆಲೆ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸುತ್ತಿದ್ದಂತೆ ಕುಪಿತಗೊಂಡ ಯುವಕ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಘಟನೆ ಸೂರತ್ ನ್ಯಾಯಾಲಯದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸೂರತ್: ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಹಿನ್ನೆಲೆ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸುತ್ತಿದ್ದಂತೆ ಕುಪಿತಗೊಂಡ ಯುವಕ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಘಟನೆ ಸೂರತ್ ನ್ಯಾಯಾಲಯದಲ್ಲಿ ನಡೆದಿದೆ.

ಈ ವರ್ಷದ ಏಪ್ರಿಲ್ 30ರಂದು ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಮಧ್ಯಪ್ರದೇಶದ 27 ವರ್ಷದ ಸುಜಿತ್ ಸಾಕೇತ್ ಗೆ ವಿಶೇಷ ಪೋಕ್ಸೊ ನ್ಯಾಯಾಧೀಶ ಪಿ ಎಸ್ ಕಲಾ ಜೀವಾವಧಿ ಶಿಕ್ಷೆ ಪ್ರಕಟಿಸಿದರು.

ಬಾಲಕಿಯು ವಲಸೆ ಕಾರ್ಮಿಕನ ಮಗಳು. ಮಗು ಒಬ್ಬಳೇ ಇದ್ದುದನ್ನು ಕಂಡ ಆರೋಪಿ ಚಾಕೊಲೇಟ್ ಕೊಡಿಸುವ ನೆಪದಲ್ಲಿ ಆಕೆಯನ್ನು ಅಪಹರಿಸಿದ್ದಾನೆ. ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಕೊಂದಿದ್ದಾನೆ.

ಹಜಿರಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಆದೇಶವನ್ನು ಘೋಷಿಸುವ ಮೊದಲು ನ್ಯಾಯಾಲಯವು 53 ಸಾಕ್ಷ್ಯಚಿತ್ರ ಸಾಕ್ಷ್ಯಗಳನ್ನು ಪರಿಗಣಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com