ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚುನಾವಣಾ ಕರ್ತವ್ಯಕ್ಕೆ ನೇಮಕಗೊಳ್ಳುವ ಸಿಬ್ಬಂದಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಯನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರ ವರ್ಗಕ್ಕೆ ಸೇರಿಸಲಾಗುವುದು ಎಂದಿರುವ ಕೇಂದ್ರ ಸರ್ಕಾರ...

ನವದೆಹಲಿ: ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಯನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರ ವರ್ಗಕ್ಕೆ ಸೇರಿಸಲಾಗುವುದು ಎಂದಿರುವ ಕೇಂದ್ರ ಸರ್ಕಾರ, ಚುನಾವಣಾ ಕರ್ತವ್ಯಕ್ಕೆ ನೇಮಕಗೊಳ್ಳುವ ಸಿಬ್ಬಂದಿ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಅಥವಾ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಂಗಳವಾರ ತಿಳಿಸಿದೆ.

ಈ ಸಂಬಂಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಕಾದ ಸಿಬ್ಬಂದಿಯನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರ ವರ್ಗಕ್ಕೆ ಸೇರಿಸಲಾಗುವುದು ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ಮುಂದಿನ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ಮುನ್ನೆಚ್ಚರಿಕೆಯ ಕ್ರಮವಾಗಿ ಎರಡು ಡೋಸ್‌ಗಳನ್ನು ಪಡೆದ ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ, ಜನವರಿ 10, 2022 ರಿಂದ ಮತ್ತೊಂದು ಡೋಸ್ COVID-19 ಲಸಿಕೆ ನೀಡಲಾಗುತ್ತಿದೆ.

"ಈ ಮುನ್ನೆಚ್ಚರಿಕೆಯ ಡೋಸ್‌ ಅನ್ನು ಚುನಾವಣಾ ಕರ್ತವ್ಯಕ್ಕೆ ನೇಮಕಗೊಳ್ಳುವ ಸಿಬ್ಬಂದಿಗೆ ಆದ್ಯತೆ ಮೇಲೆ ನೀಡಬೇಕು ಮತ್ತು ಎರಡನೇ ಡೋಸ್ ಪಡೆದ ಒಂಬತ್ತು ತಿಂಗಳ ನಂತರ ಬೂಸ್ಟರ್ ಡೋಸ್ ನೀಡಬೇಕು" ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com