ಮುಂಬೈ ಮೇಲೆ ಖಲಿಸ್ತಾನಿ ಉಗ್ರರ ಕೆಂಗಣ್ಣು: ವಾಣಿಜ್ಯ ನಗರಿಯಲ್ಲಿ ತೀವ್ರ ಕಟ್ಟೆಚ್ಚರ

ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಹೊಸ ವರ್ಸದ ಸಂಭ್ರಮದಲ್ಲಿರುವ ವೇಳೆ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸುವ ಯೋಜನೆ ರೂಪಿಸಿದ್ದಾರೆ ಎಂದು ಸ್ವತಃ ಮುಂಬೈ ಪೊಲೀಸರೇ ಮಾಹಿತಿ ನೀಡಿದ್ದಾರೆ.

ದ ಕೆಲವು ದಿನಗಳ ಹಿಂದೆ ಕೇಂದ್ರ ಗುಪ್ತಚರ ಇಲಾಖೆ ಈ ಮಾಹಿತಿಯನ್ನು ಪಡೆದುಕೊಂಡಿದ್ದು, ಹೊಸ ವರ್ಷದ ಸಂಭ್ರಮವನ್ನು ಹಾಳು ಮಾಡುವ ನಿಟ್ಟಿನಲ್ಲಿ ಖಲಿಸ್ತಾನಿ ಭಯೋತ್ಪಾದಕರು ಈ ಬಾರಿ ಪ್ರಯತ್ನ ಪಡಲಿದ್ದಾರೆ. ಅದರೊಂದಿಗೆ ಶಂಕಿತನ ಕುರಿತಾಗಿ ಮಾಹಿತಿಯನ್ನೂ ಮುಂಬೈ ಪೊಲೀಸರೊಂದಿಗೆ ಹಂಚಿಕೊಂಡಿರುವ ಕಾರಣ, ಇಡೀ ಮುಂಬೈಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಸಿಖ್ಸ್ ಫಾರ್ ಜಸ್ಟಿಸ್ (SFJ) ಸದಸ್ಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ಜರ್ಮನಿಯಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ವೇಳೆ ಆತ ಮುಂಬೈ ಮತ್ತು ಇತರ ದೊಡ್ಡ ನಗರಗಳಲ್ಲಿ ಯೋಜಿಸಲಾಗಿರುವ ದಾಳಿ ಕುರಿತು ಮಾಹಿತಿ ನೀಡಿದ್ದಾನೆಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

"SJF ಹೊರತುಪಡಿಸಿ, ಇತರ ನಿಷೇಧಿತ ಖಲಿಸ್ತಾನ್ ಪರ ಗುಂಪುಗಳು ಮುಂಬೈ, ದೆಹಲಿ ಮತ್ತು ಇತರ ನಗರಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ನೊಂದಿಗೆ ಸಂಪರ್ಕದಲ್ಲಿವೆ ಎಂಬುದರ ಕುರಿತು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೂ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com