ರೈತರ ಪ್ರತಿಭಟನೆಗೆ 'ಪ್ರಚೋದನೆ': ಕೇಂದ್ರ ಸರ್ಕಾರದ ಸೂಚನೆಯಂತೆ 250 ಖಾತೆ ನಿರ್ಬಂಧಿಸಿದ ಟ್ವೀಟರ್!

ರೈತರ ಆಂದೋಲನಕ್ಕೆ ಸಂಬಂಧಿಸಿದ 'ಸುಳ್ಳು ಮತ್ತು ಪ್ರಚೋದನಕಾರಿ ವಿಷಯಗಳನ್ನು' ಹರಡುತ್ತಿರುವ ಕಾರಣಕ್ಕಾಗಿ 250 ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಟ್ವೀಟರ್ ಗೆ ಸರ್ಕಾರ ಸೂಚಿಸಿದ ನಂತರ ಹಲವಾರು ಖಾತೆ ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸಿದೆ. 

Published: 01st February 2021 06:33 PM  |   Last Updated: 01st February 2021 06:36 PM   |  A+A-


Twitter1

ಟ್ವಿಟರ್ ಚಿತ್ರ

Posted By : Vishwanath S
Source : PTI

ನವದೆಹಲಿ: ರೈತರ ಆಂದೋಲನಕ್ಕೆ ಸಂಬಂಧಿಸಿದ 'ಸುಳ್ಳು ಮತ್ತು ಪ್ರಚೋದನಕಾರಿ ವಿಷಯಗಳನ್ನು' ಹರಡುತ್ತಿರುವ ಕಾರಣಕ್ಕಾಗಿ 250 ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಟ್ವೀಟರ್ ಗೆ ಸರ್ಕಾರ ಸೂಚಿಸಿದ ನಂತರ ಹಲವಾರು ಖಾತೆ ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸಿದೆ. 

ಕಿಸಾನ್ ಏಕ್ತಾ ಮೋರ್ಚಾ ಮತ್ತು ಬಿಕೆಯು ಏಕ್ತಾ ಉರ್ಗಾಹನ್ ಖಾತೆಗಳು ಸಾವಿರಾರು ಅನುಯಾಯಿಗಳನ್ನು ಹೊಂದಿವೆ. ಜೊತೆಗೆ ಪ್ರತಿಭಟನೆ ಹಿನ್ನೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿವೆ. ಈ ಖಾತೆಗಳ ಮೂಲಕ ಸುಳ್ಳು ಮತ್ತು ಪ್ರಚೋದನಕಾರಿ ವಿಷಯಗಳನ್ನು ಹರಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮೂಲಗಳ ಪ್ರಕಾರ, ಜನವರಿ 30ರಂದು 'ನಕಲಿ, ಬೆದರಿಕೆ ಮತ್ತು ಪ್ರಚೋದನಕಾರಿ ಟ್ವೀಟ್‌ಗಳನ್ನು ಮಾಡುತ್ತಿರುವ ಸುಮಾರು 250 ಟ್ವೀಟ್‌ಗಳು/ಟ್ವಿಟ್ಟರ್ ಖಾತೆಗಳನ್ನು ನಿರ್ಬಂಧಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ (ಎಂಇಐಟಿವೈ) ಟ್ವಿಟರ್‌ಗೆ ನಿರ್ದೇಶನ ನೀಡಿದೆ.

100%

ಪ್ರಸ್ತುತ ನಡೆಯುತ್ತಿರುವ ರೈತ ಆಂದೋಲನವನ್ನು ಗಮನದಲ್ಲಿಟ್ಟುಕೊಂಡು ಕಾನೂನು ಸುವ್ಯವಸ್ಥೆ ಉಲ್ಬಣಗೊಳ್ಳದಂತೆ ತಡೆಯಲು ಗೃಹ ಸಚಿವಾಲಯ ಮತ್ತು ಕಾನೂನು ಜಾರಿ ಸಂಸ್ಥೆಗಳ ಕೋರಿಕೆಯ ಮೇರೆಗೆ ಟ್ವೀಟ್‌ಗಳು/ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನರಮೇಧಕ್ಕೆ ಪ್ರಚೋದನೆಯು ಸಾರ್ವಜನಿಕ ಸುವ್ಯವಸ್ಥೆಗೆ ಗಂಭೀರ ಅಪಾಯವಾಗಿದೆ. ಆದ್ದರಿಂದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಟ್ವಿಟ್ಟರ್ ಖಾತೆಗಳನ್ನು ಮತ್ತು ಟ್ವೀಟ್‌ಗಳನ್ನು ನಿರ್ಬಂಧಿಸಲು ಎಂಇಐಟಿವೈ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp