ರಾಷ್ಟ್ರಗೀತೆ 'ತಪ್ಪಾಗಿ' ಹಾಡಿದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು: ಟಿಎಂಸಿ

ಹೌರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ನಾಯಕರು ರಾಷ್ಟ್ರಗೀತೆ ತಪ್ಪಾಗಿ ಹಾಡಿದ್ದಾರೆ ಎಂದು ತೃಣಮೂಲ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.

Published: 01st February 2021 12:57 AM  |   Last Updated: 01st February 2021 12:57 AM   |  A+A-


abhishek1

ಅಭಿಷೇಕ್ ಬ್ಯಾನರ್ಜಿ

Posted By : Lingaraj Badiger
Source : PTI

ಕೋಲ್ಕತಾ: ಹೌರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ನಾಯಕರು ರಾಷ್ಟ್ರಗೀತೆ ತಪ್ಪಾಗಿ ಹಾಡಿದ್ದಾರೆ ಎಂದು ತೃಣಮೂಲ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.

ಈ ಕುರಿತು ಟ್ವೀಟ್ ಮಾಡಿದ ಅಭಿಷೇಕ್ ಬ್ಯಾನರ್ಜಿ, "ದೇಶಭಕ್ತಿ ಮತ್ತು ರಾಷ್ಟ್ರೀಯತೆಯನ್ನು ಬೋಧಿಸುವವರಿಗೆ ರಾಷ್ಟ್ರಗೀತೆಯನ್ನು ಸರಿಯಾಗಿ ಹಾಡಲು ಸಹ ಬರುವುದಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.

"ಭಾರತದ ಗೌರವ ಮತ್ತು ಹೆಮ್ಮೆಯನ್ನು ಎತ್ತಿಹಿಡಿಯುತ್ತೇವೆ ಎಂದು ಹೇಳಿಕೊಳ್ಳುವ ಪಕ್ಷಕ್ಕೆ ಸರಿಯಾಗಿ ರಾಷ್ಟ್ರಗೀತೆ ಹಾಡಲು ಬರುವುದಿಲ್ಲ! ನಾಚಿಕೆಗೇಡು!. ಈ 'ರಾಷ್ಟ್ರ ವಿರೋಧಿ' ಕೃತ್ಯಕ್ಕೆ ಬಿಜೆಪಿ, ಪ್ರಧಾನಿ ಮೋದಿ, ಅಮಿತ್ ಶಾ ಕ್ಷಮೆಯಾಚಿಸುತ್ತಾರೆಯೇ?" ಎಂದು ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಕೂಡ ಟ್ವೀಟ್‌ನಲ್ಲಿ ಬಿಜೆಪಿ ರಾಷ್ಟ್ರಗೀತೆಗೆ ಅಗೌರವ ತೋರಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಎಡರಂಗ ಸಹ ಆಕ್ರೋಶ ವ್ಯಕ್ತಪಡಿಸಿದ್ದು, ರಾಷ್ಟ್ರಗೀತೆ ಹಾಡಲು ಬರದವರು ರಾಷ್ಟ್ರೀಯತೆಯ ಕುರಿತು ಧರ್ಮೋಪದೇಶವನ್ನು ನೀಡುತ್ತಿರುವುದು ವಿಪರ್ಯಾಸ ಎಂದು ಸಿಪಿಎಂ ಪೊಲಿಟ್‌ಬ್ಯುರೊ ಸದಸ್ಯ ಎಂಡಿ ಸಲೀಂ ಅವರು ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp