18 ದಿನಗಳಲ್ಲಿ 41 ಲಕ್ಷಕ್ಕೂ ಹೆಚ್ಚು ಕೊರೋನಾ ವಾರಿಯರ್ಸ್ ಗೆ ಕೊರೋನಾ ಲಸಿಕೆ: ದಾಖಲೆ ಬರೆದ ಭಾರತ
ಭಾರತದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿಯಾನ ವಿಶ್ವದಲ್ಲೇ ಹೊಸ ದಾಖಲೆಯಾಗಿದೆ. ಕೇವಲ 6 ದಿನಗಳಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.
Published: 03rd February 2021 03:12 PM | Last Updated: 03rd February 2021 03:19 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿಯಾನ ವಿಶ್ವದಲ್ಲೇ ಹೊಸ ದಾಖಲೆಯಾಗಿದೆ. ಕೇವಲ 6 ದಿನಗಳಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.
ಕಳೆದ ಜನವರಿ 16ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು. ಲಸಿಕೆ ಆರಂಭವಾದ 18 ದಿನಗಳಲ್ಲಿ ದೇಶದಲ್ಲಿ ಬರೋಬ್ಬರಿ 41 ಲಕ್ಷಕ್ಕೂ ಹೆಚ್ಚು ಕೊರೋನಾ ವಾರಿಯರ್ ಗಳಿಗೆ ಲಸಿಕೆ ನೀಡಲಾಗಿದೆ.
ಜಗತ್ತಿನಲ್ಲಿ ವೇಗವಾಗಿ ಅತೀ ಹೆಚ್ಚು ಜನರಿಗೆ ಲಸಿಕೆ ನೀಡಿದ ಮೊದಲ ದೇಶ ಭಾರತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾದ ದಿನ 2,07,229 ಮಂದಿ ಲಸಿಕೆ ಪಡೆದಿದ್ದರು. ನಂತರದ ದಿನಗಳಲ್ಲಿ ಈ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಈವರೆಗೂ 41 ಲಕ್ಷ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೋನಾ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 11,039 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದರೆ 14,225 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇನ್ನು ದೇಶಾದ್ಯಂತ 1,60,057 ಸಕ್ರಿಯ ಪ್ರಕರಣಗಳಿವೆ.