ಗಣರಾಜ್ಯೋತ್ಸವ ದಿನ ಹಿಂಸಾಚಾರ: ಎಫ್ ಐಆರ್ ಪ್ರಶ್ನಿಸಿ ಶಶಿ ತರೂರ್, ರಾಜ್‌ದೀಪ್ ಸರ್ದೇಸಾಯಿ ಸುಪ್ರೀಂ ಕೋರ್ಟ್ ಮೊರೆ

ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ವೇಳೆ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಗ್ಗೆ ಜನರನ್ನು ತಪ್ಪುದಾರಿಗೆಳೆಯುವ ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಲವು ಎಫ್ಐಆರ್ ಗಳು ದಾಖಲಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Published: 03rd February 2021 12:15 PM  |   Last Updated: 03rd February 2021 01:00 PM   |  A+A-


Rajdeep Sardesai, Shashi Tharoor

ರಾಜ್ ದೀಪ್ ಸರ್ದೇಸಾಯಿ, ಶಶಿ ತರೂರು

Posted By : Sumana Upadhyaya
Source : PTI

ನವದೆಹಲಿ: ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ವೇಳೆ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಗ್ಗೆ ಜನರನ್ನು ತಪ್ಪುದಾರಿಗೆಳೆಯುವ ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಲವು ಎಫ್ಐಆರ್ ಗಳು ದಾಖಲಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ಮೇಲೆ ದಾಖಲಾಗಿರುವ ಎಫ್ಐಆರ್ ನ್ನು ಪ್ರಶ್ನಿಸಿ ನಿನ್ನೆ ಪತ್ರಕರ್ತರಾದ ಮೃಣಾಲ್ ಪಾಂಡೆ, ಝಫರ್ ಅಘ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಅವರು ಸಹ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಕಳೆದ ಜನವರಿ 30ರಂದು ದೆಹಲಿ ಪೊಲೀಸರು ಶಶಿ ತರೂರ್, ರಾಜ್‌ದೀಪ್ ಸರ್ದೇಸಾಯಿ, ದ ಕ್ಯಾರವಾನ್ ಮತ್ತು ಇತರರ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.

ದೇಶದ್ರೋಹ ಕೇಸಿನಡಿ ಇದಕ್ಕೂ ಮುನ್ನ ನೊಯ್ಡಾ ಪೊಲೀಸರು ತರೂರು ಮತ್ತು ಇತರ ಆರು ಮಂದಿ ಪತ್ರಕರ್ತರ ವಿರುದ್ಧ ಕೇಸು ದಾಖಲಿಸಿದ್ದರು. ತಪ್ಪುದಾರಿಗೆಳೆಯುವ ಟ್ವೀಟ್ ಗೆ ಸಂಬಂಧಪಟ್ಟಂತೆ ಮಧ್ಯ ಪ್ರದೇಶ ಪೊಲೀಸರು ಸಹ ತರೂರ್ ಮತ್ತು ಇತರ ಆರು ಮಂದಿ ಪತ್ರಕರ್ತರ ವಿರುದ್ಧ ಕೇಸು ದಾಖಲಿಸಿದ್ದರು.

ಕಳೆದ ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ಸಾವಿರಾರು ಮಂದಿ ರೈತರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ನಡೆದಿತ್ತು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp