ರೈತರ ಪ್ರತಿಭಟನೆ ಬೆಂಬಲಿಸಿ ಟ್ವೀಟ್: ದೆಹಲಿ ಪೊಲೀಸರಿಂದ ಗ್ರೇಟಾ ಥನ್ಬರ್ಗ್ ವಿರುದ್ಧ ಪ್ರಕರಣ!

ದೆಹಲಿಯಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದ ಪರಿಸರವಾದಿ ಗ್ರೇಟಾ ಥನ್ಬರ್ಗ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

Published: 04th February 2021 05:07 PM  |   Last Updated: 04th February 2021 05:55 PM   |  A+A-


Greta Thunberg

ಸ್ವೀಡನ್ ಮೂಲದ ಗ್ರೇಟಾ ಥನ್ಬರ್ಗ್

Posted By : Srinivas Rao BV
Source : Online Desk

ನವದೆಹಲಿ: ದೆಹಲಿಯಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದ ಪರಿಸರವಾದಿ ಸ್ವೀಡನ್ ಮೂಲದ ಗ್ರೇಟಾ ಥನ್ಬರ್ಗ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ರೈತರ ಪ್ರತಿಭಟನೆ ವಿಷಯ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಸದ್ದು ಮಾಡುವಂತಾಗಲು ಟೂಲ್ ಕಿಟ್ ನ್ನು ಹಂಚಿಕೊಂಡಿದ್ದ ಗ್ರೇಟಾ ಥನ್ಬರ್ಗ್ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಪಿತೂರಿ, ಧಾರ್ಮಿಕ ನೆಲೆಯಲ್ಲಿ ದ್ವೇಷ ಉತ್ತೇಜನ ಮಾಡಿರುವ ಆರೋಪವನ್ನು ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. 

ಪಾಪ್ ಗಾಯಕಿ ರಿಹಾನಾ ಟ್ವೀಟ್ ಬೆನ್ನಲ್ಲೇ ಗ್ರೇಟಾ ಥನ್ಬರ್ಗ್ ಸಹ ರೈತರ ಪ್ರತಿಭಟನೆಯನ್ನು ಬೆಂಬಲಿಸಿ, #FarmersProtest in India ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರತಿಭಟನಾ ನಿರತ ರೈತರಿಗೆ ಹೇಗೆ ಬೆಂಬಲಿಸಬೇಕು ಎಂಬ ಬಗ್ಗೆ ಟೂಲ್ ಕಿಟ್ ಡಾಕ್ಯುಮೆಂಟ್ ನ್ನೂ ಸಹ ಟ್ವೀಟ್ ಮಾಡಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಆ ಟೂಲ್ ಕಿಟ್ ನ್ನು ಡಿಲೀಟ್ ಮಾಡಿ ಪರಿಷ್ಕೃತ ಟೂಲ್ ಕಿಟ್ ನ್ನು ಟ್ವೀಟ್ ಮಾಡಿದ್ದರು. 

ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಟ್ವೀಟ್ ಗಳೆಡೆಗೆ ಹಿಂದೆಂದೂ ಕಂಡಿರದ ಕ್ರಮವನ್ನು ಕೇಂದ್ರ ಸರ್ಕಾರ ಜರುಗಿಸಿತ್ತು. ರೈತರ ಟ್ರಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಮತ್ತು ಸಂಘರ್ಷಕ್ಕೆ ಸಂಬಂಧಿಸಿದಂತೆ 'ಸುಳ್ಳು ಮತ್ತು ಪ್ರಚೋದನಕಾರಿ ವಿಚಾರವನ್ನು' ಹಂಚಿಕೊಂಡಿದ್ದ ಆರೋಪದ ಮೇಲೆ ಬ್ಲಾಕ್ ಮಾಡಲಾಗಿದ್ದ ಟ್ವಿಟರ್ ಖಾತೆಗಳನ್ನು ಮರುಸ್ಥಾಪಿಸಿರುವ ಬಗ್ಗೆ ಸರ್ಕಾರವು ಟ್ವಿಟರ್‌ಗೆ ನೋಟಿಸ್ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp