ಮನ್ರೇಗಾದಡಿ 10 ಕೋಟಿ ಜನರಿಗೆ ಉದ್ಯೋಗ: ನರೇಂದ್ರ ಸಿಂಗ್ ತೋಮರ್

ಗ್ರಾಮ ಪಂಚಾಯಿತಿಗಳಿಗೆ 2.36 ಲಕ್ಷ ಕೋಟಿ ಅನುದಾನ ಒದಗಿಸುವಂತೆ 15ನೇ ಹಣಕಾಸು ಆಯೋಗ ಮಾಡಿರುವ ಶಿಫಾರಸ್ಸಿಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

Published: 05th February 2021 02:39 PM  |   Last Updated: 05th February 2021 03:00 PM   |  A+A-


Narendrasing_tomar1

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

Posted By : Nagaraja AB
Source : PTI

ನವದೆಹಲಿ:ಗ್ರಾಮ ಪಂಚಾಯಿತಿಗಳಿಗೆ 2.36 ಲಕ್ಷ ಕೋಟಿ ಅನುದಾನ ಒದಗಿಸುವಂತೆ 15ನೇ ಹಣಕಾಸು ಆಯೋಗ ಮಾಡಿರುವ ಶಿಫಾರಸ್ಸಿಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯಕ್ಕಾಗಿ 43 ಸಾವಿರ ಕೋಟಿ ಮಂಜೂರು ಮಾಡಲಾಗಿದೆ. 2.8 ಲಕ್ಷ ಕೋಟಿಯನ್ನು ಗ್ರಾಮ ಪಂಚಾಯಿತಿಗಳಿಗೆ 5 ವರ್ಷಗಳಲ್ಲಿ ಕಳುಹಿಸಲಾಗುವುದು ಎಂದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ನಿಧಿಯನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ. ಕೋವಿಡ್-19 , ಸಾಂಕ್ರಾಮಿಕ ಉಲ್ಬಣಿಸಿದಾಗ ಮನೇಗ್ರಾ ಯೋಜನೆಗಾಗಿ 61 ಸಾವಿರ ಕೋಟಿಯಿಂದ 1.115 ಲಕ್ಷ ಕೋಟಿಗೆ ಅನುದಾನವನ್ನು ಹೆಚ್ಚಿಸಲಾಗಿದ್ದು, 10 ಕೋಟಿಗೂ ಹೆಚ್ಚು ಜನರಿಗೆ ಉದ್ಯೋಗ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಬಡವರ ಪರವಾದ ಸರ್ಕಾರದ ಯೋಜನೆಗಳು ಹಳ್ಳಿಗಳಲ್ಲಿ ವಾಸಿಸುತ್ತಿರುವ ಜನರ ಜೀವನದಲ್ಲಿ ಬದಲಾವಣೆ ತಂದಿದೆ ಎಂದು ನರೇಂದ್ರ ಸಿಂಗ್ ತೋಮರ್ ಸದನಕ್ಕೆ ತಿಳಿಸಿದರು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp