ಪ್ರಧಾನಿ ಮೋದಿ ಅತ್ಯಂತ ಜನಪ್ರಿಯ, ದೂರದೃಷ್ಟಿಯ ನಾಯಕ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾ ಬಣ್ಣನೆ

ಪ್ರಧಾನಿ ನರೇಂದ್ರ ಮೋದಿ ಓರ್ವ ಜನಪ್ರಿಯ, ಪ್ರೀತಿಪಾತ್ರ ಮತ್ತು ದೂರದೃಷ್ಟಿಯ ನಾಯಕ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್ ಶಾ ಶನಿವಾರ ಬಣ್ಣಿಸಿದ್ದಾರೆ.

Published: 06th February 2021 08:28 PM  |   Last Updated: 06th February 2021 08:28 PM   |  A+A-


PM_Modi1

ಪ್ರಧಾನಿ ನರೇಂದ್ರ ಮೋದಿ

Posted By : Nagaraja AB
Source : PTI

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಓರ್ವ ಜನಪ್ರಿಯ, ಪ್ರೀತಿಪಾತ್ರ ಮತ್ತು ದೂರದೃಷ್ಟಿಯ ನಾಯಕ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್ ಶಾ ಶನಿವಾರ ಬಣ್ಣಿಸಿದ್ದಾರೆ.

ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ  ಸಮಾರಂಭದಲ್ಲಿ ಮಾತನಾಡಿದ ನ್ಯಾಯಮೂರ್ತಿ ಶಾ,  ಜನಪ್ರಿಯ, ದೂರದೃಷ್ಟಿಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ತಾವು ಕಾರ್ಯಕ್ರಮದಲ್ಲಿ ಪಾಲ್ಗೊಂಡದ್ದು, ಹೆಮ್ಮೆಯಾಗುತ್ತಿದೆ ಎಂದರು.

ಭಾರತೀಯ ಸಂವಿಧಾನದ ಅಡಿಯಲ್ಲಿ ಸ್ಥಾಪಿಸಲಾದ ಪ್ರಜಾಪ್ರಭುತ್ವ ಗಣರಾಜ್ಯದ ಒಂದು ಪ್ರಮುಖ ಲಕ್ಷಣವೆಂದರೆ ಸಂಸತ್ತು, ಕಾರ್ಯಕಾರಿ ಮತ್ತು ನ್ಯಾಯಾಂಗದ ನಡುವಿನ ಅಧಿಕಾರ ವಿಭಜನೆ. ಗುಜರಾತ್ ಹೈಕೋರ್ಟ್ ಅಧಿಕಾರ ವ್ಯಾಪ್ತಿ, ನೀತಿ ಸಂಹಿತೆಯನ್ನು ದಾಟದೆ ಯಾವಾಗಲೂ ನ್ಯಾಯ ನೀಡುತ್ತಿರುವುದಕ್ಕೆ  ತಮ್ಮಗೆ ಹೆಮ್ಮೆಯಾಗುತ್ತಿದೆ ಎಂದು ಶಾ ಹೇಳಿದರು.

ಕಳೆದ ವರ್ಷ ಕಾರ್ಯಕ್ರಮವೊಂದರಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರಾ ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಅಟ್ಟಕ್ಕೇರಿಸಿದ್ದರು. ನರೇಂದ್ರ ಮೋದಿ ಅವರ ದೂರದೃಷ್ಟಿ ಅಂತಾರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿಯಾಗಿರುವುದಾಗಿ ಈಗ ನಿವೃತ್ತರಾಗಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮಿಶ್ರಾ ಹೇಳಿದ್ದರು.


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp