ಕೋವಿಡ್-19: ದೇಶದಲ್ಲಿಂದು 11,831 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.48 ಲಕ್ಷಕ್ಕೆ ಇಳಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,831 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,08,38,194ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Published: 08th February 2021 10:02 AM  |   Last Updated: 08th February 2021 10:02 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,831 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,08,38,194ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 84 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,55,080ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,08,38,194 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 11,904 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,05,34,505ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,48,609 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಇನ್ನು ಭಾರತದಲ್ಲಿ ಒಂದೇ ದಿನ 5,32,236 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 20,19,00,614 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ, 58,12,362 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp