ಜೆಎನ್ ಯು ಹೆಸರು ಬದಲಾವಣೆ ಪ್ರಸ್ತಾವ ಇಲ್ಲ- ಪೋಖ್ರಿಯಾಲ್ 

ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರು ಬದಲಾವಣೆಯ ಪ್ರಸ್ತಾವ ಇಲ್ಲ ಎಂದು ಕೇಂದ್ರ  ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ.

Published: 08th February 2021 08:43 PM  |   Last Updated: 08th February 2021 08:43 PM   |  A+A-


JNU1

ಜೆಎನ್ ಯು

Posted By : Nagaraja AB
Source : PTI

ನವೆದಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರು ಬದಲಾವಣೆಯ ಪ್ರಸ್ತಾವ ಇಲ್ಲ ಎಂದು ಕೇಂದ್ರ  ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ.

ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರನ್ನು ಬದಲಾವಣೆ ವಿಚಾರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಳೆದ ವರ್ಷ ಪ್ರಸ್ತಾಪಿಸಿದ್ದರು.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿಶಾಂಕ್, ದೆಹಲಿಯಲ್ಲಿನ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದರು.

ಯುವ ಜನತೆಗೆ ಸ್ಫೂರ್ತಿಯ ಚಿಲುಮೆಯಂತಿದ್ದ ವಿವೇಕನಾಂದರ ಹೆಸರನ್ನು ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಇಡಬೇಕೆಂದು ಸಿ.ಟಿ. ರವಿ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಟ್ವೀಟ್ ಮಾಡಿದ್ದರು.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp