ಆಂಧ್ರ ಪ್ರದೇಶ: ಕೋವಿಡ್ ಲಸಿಕೆ ಪಡೆದಿದ್ದ ಮಹಿಳಾ ಆರೋಗ್ಯ ಕಾರ್ಯಕರ್ತೆ ಸಾವು!

ಆಂಧ್ರ ಪ್ರದೇಶದಲ್ಲಿ ಕೋವಿಡ್ ಲಸಿಕೆ ಪಡೆದಿದ್ದ ಮಹಿಳಾ ಆರೋಗ್ಯ ಕಾರ್ಯಕರ್ತರೊಬ್ಬರು 2 ದಿನಗಳ ಬಳಿಕ ಮೃತಪಟ್ಟಿದ್ದಾರೆ.

Published: 08th February 2021 09:46 AM  |   Last Updated: 08th February 2021 12:34 PM   |  A+A-


COVID-19 vaccine

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : ANI

ಶ್ರೀಕಾಕುಳಂ: ಆಂಧ್ರ ಪ್ರದೇಶದಲ್ಲಿ ಕೋವಿಡ್ ಲಸಿಕೆ ಪಡೆದಿದ್ದ ಮಹಿಳಾ ಆರೋಗ್ಯ ಕಾರ್ಯಕರ್ತರೊಬ್ಬರು 2 ದಿನಗಳ ಬಳಿಕ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ರೆಂಟಿಕೋಟ ಗ್ರಾಮದ ಗ್ರಾಮ ಸ್ವಯಂಸೇವಕರಾಗಿದ್ದ ಪಿ ಲಲಿತಾ (29 ವರ್ಷ) ಅವರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಲಲಿತಾ ಅವರು ಲಸಿಕೆ ಪಡೆದ ಬಳಿಕ ತೀವ್ರ ಅಸ್ವಸ್ಥರಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಲಲಿತಾಗೆ ಫೆಬ್ರವರಿ 5 ಶುಕ್ರವಾರದಂದು ಕೊರೋನಾ ಲಸಿಕೆ ನೀಡಲಾಗಿತ್ತು. ಲಸಿಕೆ ಪಡೆದ ಬಳಿಕ ಅವರು ತೀವ್ರ ಅಸ್ವಸ್ಥರಾಗಿದ್ದರು. ಭಾನುವಾರ ರಾತ್ರಿ ನಿಧನರಾಗಿದ್ದರು. ಆಕೆಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಮರಣೋತ್ತರ ಪರೀಕ್ಷೆಗಳ ಬಳಿಕ ತಿಳಿಯಲಿದೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಕಾಕುಳಂನ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಡಿಎಂಎಚ್‌ಒ) ಡಾ.ಕೆ.ಸಿ.ಚಂದ್ರ ನಾಯಕ್ ಅವರು, ಪಿ.ಲಲಿತಾ ಲಸಿಕೆ ಪಡೆದ ಬಳಿಕ ಅವರು ಸಾಮಾನ್ಯವಾಗಿಯೇ ಇದ್ದರು. ಅವರಲ್ಲಿ ಲಸಿಕೆ ಪ್ರತಿಕೂಲ ಲಕ್ಷಣಗಳು ಕಂಡುಬಂದಿರಲಿಲ್ಲ. ಇದಾಗ್ಯೂ ಮರಣೋತ್ತರ ಪರೀಕ್ಷೆಗಳ ಬಳಿಕ ಆಕೆಯ ಸಾವಿಗೆ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ. 

ಇದೇ ವಿಚಾರವಾಗಿ ಮಾತನಾಡಿದ ಲಲಿತಾ ಅವರ ಕುಟುಂಬ ಸದಸ್ಯರು,'ಅವರು ನಿನ್ನೆ ತನಕ ಸಾಮಾನ್ಯವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಎಂದಿನಂತೆ ಮಲಗಿದ್ದರು. ಭಾನುವಾರ ಮುಂಜಾನೆ 3 ಗಂಟೆಗೆ ಲಲಿತಾ ನಿಧನರಾಗಿದ್ದಾರೆ.  ಅವರು ಬೆಳಿಗ್ಗೆ 4 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಲಲಿತಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಲಸಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. 
 

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp