ಕೆಂಪುಕೋಟೆಯಲ್ಲಿ ದಾಂಧಲೆ: ಪ್ರಮುಖ ಆರೋಪಿ ನಟ ದೀಪ್ ಸಿಧು 7 ದಿನ ಪೊಲೀಸ್ ವಶಕ್ಕೆ

ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆ ಮೇಲೆ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದೀಪ್ ಸಿಧು ಅವರನ್ನು 10 ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Published: 09th February 2021 06:45 PM  |   Last Updated: 09th February 2021 06:53 PM   |  A+A-


deep-sidhu

ದೀಪ್ ಸಿಧು

Posted By : Lingaraj Badiger
Source : PTI

ನವದೆಹಲಿ: ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆ ಮೇಲೆ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದೀಪ್ ಸಿಧು ಅವರನ್ನು ದೆಹಲಿ ನ್ಯಾಯಾಲಯ 7 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ದೆಹಲಿಯ ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿ ರೈತರು ಹಿಂಸಾಚಾರ ನಡೆಸಲು ಪ್ರೇರಣೆ ನೀಡಿದ್ದ ಆರೋಪ ಎದುರಿಸುತ್ತಿರುವ ದೀಪ್ ಸಿಧುವನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪ್ರಿಗ್ಯಾ ಗುಪ್ತಾ ಅವರ ಮುಂದೆ ಹಾಜರುಪಡಿಸಿದ್ದರು. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 10 ದಿನ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ದೀಪ್ ಸಿಧು ಅವರನ್ನು 7 ದಿನ ಮಾತ್ರ ಪೊಲೀಸರ್ ವಶಕ್ಕೆ ನೀಡಿದೆ.

ಕೆಂಪು ಕೋಟೆ ಹಿಂಸಾಚಾರದ ಬಳಿಕ ತಲೆಮರೆಸಿಕೊಂಡಿದ್ದ ದೀಪು ಸಿಧು ಬಗ್ಗೆ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು. ಅಲ್ಲದೆ ಲುಕ್ ಔಟ್ ನೊಟೀಸ್ ಜಾರಿಗೊಳಿಸಿದ್ದರು. ಅಂತಿಮವಾಗಿ 14 ದಿನಗಳ ಬಳಿಕ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದೀಪ್ ಸಿಧು ಬಿಜೆಪಿ ಕಾರ್ಯಕರ್ತ ಎಂಬ ಮಾತುಗಳು ಕೇಳಿಬಂದಿದ್ದವು. ಅಲ್ಲದೆ ದೀಪ್ ಸಿಧು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಕಳೆದ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಸಂಸದ ಹಾಗೂ ನಟ ಸನ್ನಿ ಡಿಯೋಲ್ ಅವರ ಪ್ರಚಾರ ಮ್ಯಾನೇಜರ್ ಸಹ ಆಗಿದ್ದರು.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp