ಬಿಜೆಪಿ ನಾಯಕರು ಸಮಾಜ ಒಡೆಯಲು ರಥಯಾತ್ರೆ ಮಾಡುತ್ತಿದ್ದಾರೆ: ಮಮತಾ ಬ್ಯಾನರ್ಜಿ

ಬಿಜೆಪಿ ನಾಯಕರು "ದೇವರುಗಳಂತೆ" ರಥಗಳಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದು ಅಪಹಾಸ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಧರ್ಮದ ಆಧಾರದ ಮೇಲೆ...

Published: 10th February 2021 03:25 PM  |   Last Updated: 10th February 2021 03:25 PM   |  A+A-


mamata1

ಮಮತಾ ಬ್ಯಾನರ್ಜಿ

Posted By : Lingaraj Badiger
Source : PTI

ರಾಯಗಂಜ್: ಬಿಜೆಪಿ ನಾಯಕರು "ದೇವರುಗಳಂತೆ" ರಥಗಳಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದು ಅಪಹಾಸ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ಒಡಕು ಸೃಷ್ಟಿಸುವುದು ಅವರ ರಾಜಕೀಯ ಅಜಂಡ ಎಂದು ಮಂಗಳವಾರ ಆರೋಪಿಸಿದ್ದಾರೆ.

ಇಂದು ರಾಯಗಂಜ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ದೀದಿ, ಕೇಸರಿ ಪಕ್ಷವು ಹಿಂದೂ ಧರ್ಮದ ಬಗ್ಗೆ ಸುಳ್ಳನ್ನು ಆಶ್ರಯಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

"ರಥಯಾತ್ರೆ ಒಂದು ಧಾರ್ಮಿಕ ಹಬ್ಬ. ನಾವೆಲ್ಲರೂ ಈ ಉತ್ಸವದಲ್ಲಿ ಭಾಗವಹಿಸಿದ್ದೇವೆ. ಭಗವಾನ್ ಜಗನ್ನಾಥ್, ಬಲರಾಮ್ ಮತ್ತು ದೇವತೆ ಸುಭದ್ರಾ ಆ ರಥಗಳಲ್ಲಿ ಪ್ರಯಾಣಿಸುವುದನ್ನು ನಾವು ತಿಳಿದಿದ್ದೇವೆ. ಆದರೆ, ಬಿಜೆಪಿ ನಾಯಕರು ಸಮಾಜವನ್ನು ವಿಭಜಿಸಲು ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಈ ರಥಯಾತ್ರೆಯನ್ನು ಬಳಸುತ್ತಿದ್ದಾರೆ ಮತ್ತು ಒಬ್ಬರ ವಿರುದ್ಧ ಇನ್ನೊಬ್ಬರನ್ನು ಎತ್ತಿಕಟ್ಟುತ್ತಿದ್ದಾರೆ. ಬಿಜೆಪಿ ನಾಯಕರು ದೇವರುಗಳಂತೆ ರಥಗಳಲ್ಲಿ ಪ್ರಯಾಣಿಸುತ್ತಿದ್ದಾರೆ" ಎಂದು ಪಶ್ಚಿಮ ಬಂಗಾಳ ಸಿಎಂ ಟೀಕಿಸಿದರು.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೊರಗಿನವರನ್ನು ರಾಜ್ಯಕ್ಕೆ ಕರೆತರುತ್ತಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ ಟಿಎಂಸಿ ಮುಖ್ಯಸ್ಥೆ, ಫೋಟೋಗಾಗಿ ಮಾತ್ರ ಸ್ಥಳೀಯರ ಮನೆಗಳಲ್ಲಿ ಊಟ ಮಾಡುತ್ತಿದ್ದಾರೆ ಎಂದರು.


Stay up to date on all the latest ರಾಷ್ಟ್ರೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp