ಸುಳ್ಳು ಸುದ್ದಿ, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣ ಬಳಸುವವರ ವಿರುದ್ಧ ಕಠಿಣ ಕ್ರಮ: ಕೇಂದ್ರ ಸರ್ಕಾರ

ಸುಳ್ಳು ಸುದ್ದಿಗಳನ್ನು ಹಬ್ಬಿಸಲು, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಹೇಳಿದ್ದಾರೆ.

Published: 11th February 2021 02:03 PM  |   Last Updated: 11th February 2021 02:03 PM   |  A+A-


Ravi shankar prasad

ಕಾನೂನು ಸಚಿವ ರವಿಶಂಕರ್ ಪ್ರಸಾದ್

Posted By : Manjula VN
Source : Online Desk

ನವದೆಹಲಿ: ಸುಳ್ಳು ಸುದ್ದಿಗಳನ್ನು ಹಬ್ಬಿಸಲು, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಗುರುವಾರ ಮಾತನಾಡಿರುವ ಅವರು, ನಾವು ಸಾಮಾಜಿಕ ಮಾಧ್ಯಮಗಳನ್ನು ತುಂಬಾ ಗೌರವಿಸುತ್ತೇವೆ. ಅವುಗಳಿಂದ ಸಾಮಾನ್ಯ ಜನರಿಗೆ ಸಹಾಯವಾಗುತ್ತಿದೆ. ಡಿಜಿಟಲ್ ಇಂಡಿಯಾ ಅಭಿಯಾನದಲ್ಲಿ ಸಾಮಾಜಿಕ ಮಾಧ್ಯಮಗಳು ದೊಡ್ಡ ಪಾತ್ರ ವಹಿಸಿವೆ. ಆದರೆ, ನಕಲಿ ಸುದ್ದಿಗಳನ್ನು ಹರಡಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ ಟ್ವಿಟರ್ ಜೊತೆಗಿನ ಜಟಾಪಟಿ ಕುರಿತು ಮಾತನಾಡಿ, ಸಾಮಾಜಿಕ ಮಾಧ್ಯಮ ವೇದಿಕೆಗಳ ಇಬ್ಬಗೆಯ ನೀತಿಯನ್ನು ಭಾರತದಲ್ಲಿ ಅನುಮತಿಸಲಾಗದು. ಟ್ವಿಟರ್, ಫೇಸ್‌ಬುಕ್, ಲಿಂಕ್ಡ್‌ಇನ್ ಸೇರಿದಂತೆ ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳು ತಪ್ಪು ಮಾಡಿದ್ದಲ್ಲಿ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.

'ನೀವು ಇಲ್ಲಿ ಕೋಟ್ಯಾಂತರ ಫಾಲೋವರ್‌ಗಳನ್ನು ಹೊಂದಿದ್ದೀರಿ. ಭಾರತದಲ್ಲಿ ಕಾರ್ಯನಿರ್ವಹಿಸಿ. ಅದರಿಂದ ಹಣ ಸಂಪಾದಿಸಿ. ಆದರೆ, ನೀವು ಭಾರತೀಯ ಕಾನೂನು ಮತ್ತು ಸಂವಿಧಾನವನ್ನು ಪಾಲಿಸಬೇಕಾಗುತ್ತದೆ' ಎಂದು ಸಾಮಾಜಿಕ ಮಾಧ್ಯಮಗಳಿಗೆ ಇದೇ ವೇಳೆ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 'ಸುಳ್ಳು ಮತ್ತು ಪ್ರಚೋದನಕಾರಿ ವಿಚಾರವನ್ನು' ಹಂಚಿಕೊಂಡಿದ್ದ ಆರೋಪದ ಮೇಲೆ ಬ್ಲಾಕ್ ಮಾಡಲಾಗಿದ್ದ ಟ್ವಿಟರ್ ಖಾತೆಗಳನ್ನು ಮರುಸ್ಥಾಪಿಸಿರುವ ಬಗ್ಗೆ ಸರ್ಕಾರವು ಟ್ವಿಟರ್‌ಗೆ ನೋಟಿಸ್ ನೀಡಿತ್ತು.

ಸರ್ಕಾರದ ಆದೇಶದ ಹೊರತಾಗಿಯೂ ಟ್ವಿಟರ್ ಏಕಪಕ್ಷೀಯವಾಗಿ ಖಾತೆಗಳನ್ನು ಮರುಸ್ಥಾಪಿಸಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿತ್ತು. ‘ಸರ್ಕಾರದ ನಿರ್ದೇಶನವನ್ನು ಟ್ವಿಟರ್ ಪಾಲಿಸಬೇಕಾಗುತ್ತದೆ. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದೂ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿತ್ತು.

ಕೆಲವು ಖಾತೆಗಳನ್ನು ಬ್ಲಾಕ್ ಮಾಡುವ ಭಾರತ ಸರ್ಕಾರದ ಆದೇಶ ಸ್ಥಳೀಯ ಕಾನೂನಿಗೆ ವ್ಯತಿರಿಕ್ತವಾಗಿದೆ. ಖಾತೆಗಳ ಸಂಪೂರ್ಣ ನಿಷೇಧ ಒಪ್ಪಲಾಗದು ಎಂದಿರುವ ಟ್ವಿಟರ್ ಅವುಗಳನ್ನು ಭಾರತದೊಳಗೆ ಮಾತ್ರ ನಿರ್ಬಂಧಿಸಬಹುದು ಎಂದು ಬುಧವಾರ ಹೇಳಿದೆ.

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp