ಸಿಎಎ ವಿರುದ್ಧ ಪ್ರತಿಭಟನೆ: ಹೋರಾಟಗಾರ ಅಖಿಲ್ ಗೊಗೋಯಿ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಅಸ್ಸಾಂನಲ್ಲಿ ಸಿಎಎ ವಿರುದ್ಧ ನಡೆದ ಹಿಂಸಾಚಾರದಲ್ಲಿ ಬಂಧನಕ್ಕೊಳಗಾಗಿರುವ ಹೋರಾಟಗಾರ ಅಖಿಲ್ ಗೊಗೋಯಿ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
Published: 11th February 2021 12:45 PM | Last Updated: 11th February 2021 01:16 PM | A+A A-

ಅಖಿಲ್ ಗೊಗೋಯಿ
ನವದೆಹಲಿ: ಅಸ್ಸಾಂನಲ್ಲಿ ಸಿಎಎ ವಿರುದ್ಧ ನಡೆದ ಹಿಂಸಾಚಾರದಲ್ಲಿ ಬಂಧನಕ್ಕೊಳಗಾಗಿರುವ ಹೋರಾಟಗಾರ ಅಖಿಲ್ ಗೊಗೋಯಿ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ಈ ಹಂತದಲ್ಲಿ ನಾವು ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದಿರುವ ನ್ಯಾಯಮೂರ್ತಿಗಳಾದ ಎನ್'ವಿ ರಮಣ, ಸೂರ್ಯ ಕಾಂತ್ ಹಾಗೂ ಅನಿರುದ್ಧ್ ಬೋಸ್ ಅವರಿದ್ದ ಪೀಠ ಜಾಮೀನು ನಿರಾಕರಿಸಿತು.
ಅಲ್ಲದೆ, ವಿಚಾರಣೆ ಆರಂಭವಾದ ಬಳಿಕ ಅರ್ಜಿದಾರರು ಜಾಮೀನು ಪಡೆಯಲು ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಅರ್ಜಿದಾರರ ಪರ ವಕೀಲ ರಣಮೋನಿ ಭುಯಾನ್'ಗೆ ತಿಳಿಸಿದೆ.
ಈ ಹಿಂದೆ ಗೊಗೋಯಿಯವರ ಜಾಮೀನು ಅರ್ಜಿಯನ್ನು ಗುವಾಹಟಿ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಗೊಗೋಯಿಯವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.