ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ!

ಸತತವಾಗಿ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ರಾಜ್ಯದ ತೈಲ ರಿಟೈಲರ್ಸ್ ಗಳ ಪ್ರಕಾರ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 31 ಪೈಸೆ ಹಾಗೂ ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ. 

Published: 12th February 2021 03:37 PM  |   Last Updated: 12th February 2021 04:42 PM   |  A+A-


Casual_images1

ಸಾಂದರ್ಭಿಕ ಚಿತ್ರ

Posted By : Nagaraja AB
Source : The New Indian Express

ನವದೆಹಲಿ: ಸತತವಾಗಿ ನಾಲ್ಕನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ರಾಜ್ಯದ ತೈಲ ರಿಟೈಲರ್ಸ್ ಗಳ ಪ್ರಕಾರ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 31 ಪೈಸೆ ಹಾಗೂ ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ. 

ಇದರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾರ್ವಕಾಲಿಕ ದಾಖಲೆ ಎಂಬಂತೆ ಲೀಟರ್ ಪೆಟ್ರೋಲ್ ದರ 88.14 ಪೈಸೆಯಾದರೆ, ಮುಂಬೈಯಲ್ಲಿ 94.64 ಪೈಸೆಯಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ದರ 78.38 ಪೈಸೆಯಷ್ಟಿದ್ದು, ಮುಂಬೈಯಲ್ಲಿ 85.35 ಪೈಸೆಗೆ ಹೆಚ್ಚಳವಾಗಿದೆ.

ನಾಲ್ಕು ದಿನಗಳಲ್ಲಿ ಲೀಟರ್ ಪೆಟ್ರೋಲ್ 1.21 ರೂ. ಮತ್ತು ಲೀಟರ್ ಡೀಸೆಲ್ 1.25 ರೂ. ಏರಿಕೆಯಾಗಿದೆ. ದರ ತಗ್ಗಿಸಲು ಅಬಕಾರಿ ಸುಂಕವನ್ನು ಇಳಿಕೆ ಮಾಡುವುದನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಬುಧವಾರ ಸಂಸತ್ತಿನಲ್ಲಿ ತಿಳಿಸಿದರು.

ಕೋವಿಡ್-19 ಲಸಿಕೆ ಸಿಗುತ್ತಿದ್ದಂತೆ ಒಂದು ವರ್ಷದ ನಂತರ ತೈಲ ಬೆಲೆಯಲ್ಲಿ ಸುಧಾರಣೆಯಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಗೆ 61 ಅಮೆರಿಕನ್ ಡಾಲರ್ ಗೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp