ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

ಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

Published: 13th February 2021 01:50 PM  |   Last Updated: 13th February 2021 02:27 PM   |  A+A-


Police personnel start lathi-charge on protesting farmers at ITO during the tractor rally on Republic Day.

ಹಿಂಸಾಚಾರ ಸಂಭವಿಸಿದ ಸ್ಥಳದಲ್ಲಿ ಲಾಠಿಚಾರ್ಜ್ ಮಾಡುತ್ತಿರುವ ಪೊಲೀಸರು

Posted By : Manjula VN
Source : The New Indian Express

ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

ಬಂಧಿತರನ್ನು ಸುಖ್ಮೀತ್ ಸಿಂಗ್ (35), ಗುಣ್ದೀಪ್ ಸಿಂಗ್ (33) ಮತ್ತು ಹರ್ವೀಂದರ್ ಸಿಂಗ್ (32) ಎಂದು ಗುರ್ತಿಸಲಾಗಿದೆ. 

ಫೆಬ್ರವರಿ 10 ರಂದು ಪ್ರಕರಣ ಸಂಬಂದ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ಸಂಬಂಧ ಈ ವರೆಗೂ ಒಟ್ಟಾರೆ 14 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಜನವರಿ 26 ರಂದು ನಡೆದ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದರು.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp