ಉತ್ತರಾಖಂಡ್ ಪ್ರವಾಹ: ತಪೋವನ್ ಸುರಂಗದಲ್ಲಿ ಎರಡು ಮೃತದೇಹ ವಶ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ 

ಫೆಬ್ರವರಿ 7 ರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ತಪೋವನ್ ಸುರಂಗದಿಂದ  ಇನ್ನೂ ಎರಡು ಮೃತದೇಹಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

Published: 14th February 2021 09:04 AM  |   Last Updated: 14th February 2021 09:04 AM   |  A+A-


Rescue_operations_at_Tapovan_Tunnel1

ತಪೋವನ್ ಸುರಂಗದ ಬಳಿ ರಕ್ಷಣಾ ಕಾರ್ಯಾಚರಣೆ

Posted By : Nagaraja AB
Source : The New Indian Express

ಚಮೋಲಿ: ಫೆಬ್ರವರಿ 7 ರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ತಪೋವನ್ ಸುರಂಗದಿಂದ  ಇನ್ನೂ ಎರಡು ಮೃತದೇಹಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ ಹಿಮಸ್ಫೋಟ ಘಟನೆಯಲ್ಲಿ ಈವರೆಗೂ ಒಟ್ಟಾರೇ 40 ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳಲ್ಲಿ ಬಹುತೇಕ ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಉತ್ತರಾಖಂಡ್ ಪೊಲೀಸ್, ರಾಜ್ಯ ವಿಪತ್ತು ನಿರ್ವಹಣೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣೆ ತಂಡದ ಯೋಧರು ಈ ಶವಗಳನ್ನು ಹೊರತೆಗೆದಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.

ರಕ್ಷಣಾ ತಂಡಗಳಿಂದ ತಪೋವನದ ಪ್ರಮುಖ ಸುರಂಗದ ಬಳಿ  ಫೆಬ್ರವರಿ 7 ರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು 2 ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕುಮಾರ್ ಟ್ವೀಟ್ ಮಾಡಿದ್ದಾರೆ.

 ಎರಡು ಮೃತದೇಹಗಳನ್ನು ವಶಕ್ಕೆ ಪಡೆದ ನಂತರ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ವಾತಿ ಭಾಡೋರಿಯಾ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp