ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 11,649 ಹೊಸ ಸೋಂಕು ಪ್ರಕರಣ, 90 ಮಂದಿ ಸಾವು

24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 11,649 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.09 ಕೋಟಿ ಗಡಿದಾಟಿದೆ.

Published: 15th February 2021 09:59 AM  |   Last Updated: 15th February 2021 12:51 PM   |  A+A-


Covid-19 test-2

ಕೋವಿಡ್-19 ಪರೀಕ್ಷೆ (ಸಂಗ್ರಹ ಚಿತ್ರ)

ANI

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 11,649 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.09 ಕೋಟಿ ಗಡಿದಾಟಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 11,649 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,09,16,589ಕ್ಕೆ ಏರಿಕೆಯಾಗಿದೆ.  ಇನ್ನು ನಿನ್ನೆ ದೇಶಾದ್ಯಂತ 9,489 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 1,06,21,220 ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ1,39,637 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 90 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾಗೆ ಬಲಿಯಾದ ಸೋಂಕಿತರ ಸಂಖ್ಯೆ 1,55,732 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
 
24 ಗಂಟೆಗಳಲ್ಲಿ 4, 86, 122 ಕೋವಿಡ್-19 ಪರೀಕ್ಷೆ: ಐಸಿಎಂಆರ್ 
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 4, 86, 122  ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜ.2ರವರೆಗೂ 20,67,16,634 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ. 


Stay up to date on all the latest ರಾಷ್ಟ್ರೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp