ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಗಳಿಗೆ ವಂಚಿಸಿದ್ದ ಮೂವರ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಗಳಿಗೆ ವಂಚಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

Published: 15th February 2021 04:24 PM  |   Last Updated: 15th February 2021 04:24 PM   |  A+A-


Bengaluru police arrested 6 illegal activists, 130 kg Ganja seized

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಗಳಿಗೆ ವಂಚಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ನುಹ್ ನಿವಾಸಿ ಸಾಜಿದ್(26), ಮಥುರಾ ಮೂಲದ ಕಪಿಲ್(18) ಮತ್ತು ಮನ್ವಿಂದರ್ ಸಿಂಗ್ (25) ಅವರನ್ನು ಭಾರತಪುರ-ಮಥುರಾ ಗಡಿಯಲ್ಲಿ ತಾಂತ್ರಿಕ ಕಣ್ಗಾವಲು ಸಹಾಯದಿಂದ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಾರಿಸ್(25) ಎಂದು ಗುರುತಿಸಲಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನ್​ಲೈನ್ ವೆಬ್​ಸೈಟ್ ಓಎಲ್‌ಎಕ್ಸ್‌ನಲ್ಲಿ ಸೆಕೆಂಡ್ ಹ್ಯಾಂಡ್ ಸೋಫಾ ಮಾರಲು ಮುಂದಾಗಿದ್ದ ಕೇಜ್ರಿವಾಲ್ ಅವರ ಪುತ್ರಿಗೆ ಆ ಸೋಫಾ ಕೊಳ್ಳುವುದಾಗಿ ನಂಬಿಸಿ ಆಕೆಯ ಬ್ಯಾಂಕ್ ಖಾತೆಗೆ ಸ್ವಲ್ಪ ಹಣವನ್ನು ಹಾಕಿದ್ದ. ನಂತರ ಆಕೆಗೆ ಬಾರ್ ಕೋಡ್ ಕಳುಹಿಸಿ, ಅದನ್ನು ಸ್ಕ್ಯಾನ್​ ಮಾಡಲು ಹೇಳಿದ್ದ. ಆ ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆ ಆಕೆಯ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಆಗಿತ್ತು. ಈ ಮೂಲಕ ಸೋಫಾ ಖರೀದಿಸುವ ನೆಪದಲ್ಲಿ ಈ ನಾಲ್ವರು ಅರವಿಂದ್ ಕೇಜ್ರಿವಾಲ್ ಮಗಳಿಗೆ 34,000 ರೂ. ಪಂಗನಾಮ ಹಾಕಿದ್ದರು.


Stay up to date on all the latest ರಾಷ್ಟ್ರೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp