ದಿಶಾ ರವಿಗೆ ಎಫ್ಐಆರ್ ಪ್ರತಿ, ಕುಟುಂಬ ಭೇಟಿಗೆ ಅವಕಾಶ ನೀಡಿ: ದೆಹಲಿ ಪೊಲೀಸರಿಗೆ ಕೋರ್ಟ್ ಸೂಚನೆ

ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಎಫ್ ಐಆರ್ ಪ್ರತಿ ನೀಡುವಂತೆ ಮತ್ತು ಕುಟುಂಬ ಸದಸ್ಯರ ಭೇಟಿಗೆ ಅವಕಾಶ ನೀಡುವಂತೆ...

Published: 16th February 2021 08:18 PM  |   Last Updated: 16th February 2021 08:18 PM   |  A+A-


Disha Ravi

ದಿಶಾ ರವಿ

Posted By : Lingaraj Badiger
Source : PTI

ನವದೆಹಲಿ: ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಎಫ್ ಐಆರ್ ಪ್ರತಿ ನೀಡುವಂತೆ ಮತ್ತು ಕುಟುಂಬ ಸದಸ್ಯರ ಭೇಟಿಗೆ ಅವಕಾಶ ನೀಡುವಂತೆ ದೆಹಲಿ ಪೊಲೀಸರಿಗೆ ಮಂಗಳವಾರ ಕೋರ್ಟ್ ಸೂಚನೆ ನೀಡಿದೆ.

ಎಫ್‌ಐಆರ್ ಜೊತೆಗೆ, ಆಕೆಯ ಬಂಧನ ವಿಚಾರಣೆಗಾಗಿ ಇರಿಸಲಾಗಿರುವ ಬಂಧನ ಜ್ಞಾಪಕ ಪತ್ರ ಮತ್ತು ರಿಮಾಂಡ್ ಕಾಗದ ಪ್ರತಿಗಳನ್ನು ಆರೋಪಿಗೆ ಒದಗಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ.

ದಿಶಾ ರವಿ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪಂಕಜ್ ಶರ್ಮಾ ಅವರು, ಪೊಲೀಸ್ ಕಸ್ಟಡಿಯಲ್ಲಿರುವಾಗ ದಿಶಾ ರವಿ ಅವರ ಕುಟುಂಬ ಸದಸ್ಯರೊಂದಿಗೆ ದಿನಕ್ಕೆ 15 ನಿಮಿಷ ದೂರವಾಣಿಯಲ್ಲಿ ಮಾತನಾಡಲು ಮತ್ತು ದಿನಕ್ಕೆ 30 ನಿಮಿಷಗಳ ಕಾಲ ವಕೀಲರ ಭೇಟಿಗೆ ಅವಕಾಶ ನೀಡಬೇಕು ಎಂದು ಆದೇಶಿಸಿದ್ದಾರೆ.

ಭಾನುವಾರ ಆರೋಪಿಯ ವಿಚಾರಣೆ ನಡೆಸಿದ್ದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ದಿಶಾ ರವಿ ಅವರನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿತ್ತು.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದನ್ನು ವಿವರಿಸುವ ‘ಟೂಲ್‌ಕಿಟ್‌’ ಅನ್ನು ಸಿದ್ಧಪಡಿಸಿದ ಆರೋಪದ ಮೇಲೆ ದಿಶಾ ರವಿ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಪ್ರತಿಪಕ್ಷಗಳು, ಹೋರಾಟಗಾರರು, ಲೇಖಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ದಿಶಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp