ಪುದುಚೇರಿ: ಮತ್ತೆ 3 ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಸಿದ್ಧ, ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ - ಬಿಜೆಪಿ

ಪುದುಚೇರಿಯಲ್ಲಿ ವಿಧಾನಸಭೆಗೆ ಇನ್ನೂ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ವಿ ನಾರಾಯಣಸ್ವಾಮಿ ಅವರ ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ  ಎಂದು ಬಿಜೆಪಿ ಶುಕ್ರವಾರ ಹೇಳಿದ.

Published: 19th February 2021 03:32 PM  |   Last Updated: 19th February 2021 03:32 PM   |  A+A-


narayanasami

ವಿ ನಾರಾಯಣಸ್ವಾಮಿ

Posted By : Lingaraj Badiger
Source : PTI

ಬೆಂಗಳೂರು: ಪುದುಚೇರಿಯಲ್ಲಿ ವಿಧಾನಸಭೆಗೆ ಇನ್ನೂ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ವಿ ನಾರಾಯಣಸ್ವಾಮಿ ಅವರ ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ  ಎಂದು ಬಿಜೆಪಿ ಶುಕ್ರವಾರ ಹೇಳಿದ.

ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಲ್ವರು ಕಾಂಗ್ರೆಸ್ ಶಾಸಕರಲ್ಲಿ ಇಬ್ಬರು - ಎ ನಮಶಿವಯಂ ಮತ್ತು ಇ ಥೀಪೈಂಥನ್ ಅವರು ಬಿಜೆಪಿಗೆ ಸೇರಿದ್ದಾರೆ.

ಇತರ ಇಬ್ಬರು ಕಾಂಗ್ರೆಸ್ ಶಾಸಕರಾದ ಮಲ್ಲಾಡಿ ಕೃಷ್ಣ ರಾವ್ ಮತ್ತು ಎ ಜಾನ್ ಕುಮಾರ್ ಅವರು ಶೀಘ್ರದಲ್ಲೇ ಕೇಸರಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ಪುದುಚೇರಿ ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಅವರು ಹೇಳಿದ್ದಾರೆ.

"ಆ ಇಬ್ಬರೂ ಸಹ ಬಿಜೆಪಿಗೆ ಸೇರಲಿದ್ದಾರೆ. ಈ ಸಂಬಂಧ ನಮ್ಮ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ" ಎಂದು ಬಿಜೆಪಿ ಕರ್ನಾಟಕ ಘಟಕದ ಉಪಾಧ್ಯಕ್ಷರಾಗಿರುವ ಸುರಾನಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಲಿದೆಯೇ? ಎಂಬ ಪ್ರಶ್ನಿಗೆ ಉತ್ತರಿಸಿದ ಬಿಜೆಪಿ ನಾಯಕ, "ಖಂಡಿತವಾಗಿಯೂ, ಶೇಕಡಾ 100 ರಷ್ಟು ಕಾಂಗ್ರೆಸ್ ಸರ್ಕಾರ ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾಗಲಿದೆ ಎಂದರು.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp