ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಪ್ರಕರಣ: ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್
ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ನೀಡಿದೆ.
Published: 19th February 2021 05:14 PM | Last Updated: 19th February 2021 05:14 PM | A+A A-

ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ನೀಡಿದೆ.
ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಫೆಬ್ರವರಿ 22 ರಂದು ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಅಮಿತ್ ಶಾ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.
ಆಗಸ್ಟ್ 11, 2018 ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಅಮಿತ್ ಶಾ ಅವರು ಟಿಎಂಸಿ ಸಂಸದರ ವಿರುದ್ಧ ಕೆಲ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ಅಭಿಷೇಕ್ ಬ್ಯಾನರ್ಜಿ ಪರ ವಕೀಲ ಸಂಜಯ್ ಬಸು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.