ಪಶ್ಚಿಮ ಬಂಗಾಳದಲ್ಲಿ ನೇತಾಜಿ ಪರಂಪರೆ ಅಳಿಸಿಹಾಕಲು ಯತ್ನ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರನ್ನು ಮರೆತುಬಿಡುವಂತೆ ಮಾಡಲು ಸಾಕಷ್ಟು ಪ್ರಯತ್ನಿಸಲಾಗಿದೆ. ಆದರೆ ಅದು ಸಾಧ್ಯವಿಲ್ಲ. ಅವರ ಧೈರ್ಯ, ದೇಶಭಕ್ತಿ ಮತ್ತು ರಾಷ್ಟ್ರಕ್ಕೆ ನೀಡಿದ ನಿಸ್ವಾರ್ಥ....

Published: 19th February 2021 03:06 PM  |   Last Updated: 19th February 2021 03:06 PM   |  A+A-


amit shah

ಅಮಿತ್ ಶಾ

Posted By : Lingaraj Badiger
Source : PTI

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರನ್ನು ಮರೆತುಬಿಡುವಂತೆ ಮಾಡಲು ಸಾಕಷ್ಟು ಪ್ರಯತ್ನಿಸಲಾಗಿದೆ. ಆದರೆ ಅದು ಸಾಧ್ಯವಿಲ್ಲ. ಅವರ ಧೈರ್ಯ, ದೇಶಭಕ್ತಿ ಮತ್ತು ರಾಷ್ಟ್ರಕ್ಕೆ ನೀಡಿದ ನಿಸ್ವಾರ್ಥ ಸೇವೆಯ ಪರಂಪರೆ ಶಾಶ್ವತವಾಗಿ ಉಳಿಯುತ್ತದೆ ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.

ಬಂಗಾಳಿ ಕ್ರಾಂತಿಕಾರಿಗಳಿಗೆ ಗೌರವ ಸಲ್ಲಿಸುವ "ಶೌರ್ಯಾಂಜಲಿ ಕಾರ್ಯಕ್ರಮ"ವನ್ನು ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಹೋರಾಟಗಾರರ ಜೀವನ ಮತ್ತು ಹೋರಾಟಗಳಿಂದ ಸ್ಫೂರ್ತಿ ಪಡೆಯಬೇಕೆಂದು ದೇಶದ ಯುವಕರಿಗೆ ಕರೆ ನೀಡಿದರು.

ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಪರಂಪರೆ ಅಳಿಸಿಹಾಕುವ ಯತ್ನ ವಿಫಲವಾಗಿದೆ. ಅವರ ಧೈರ್ಯ, ದೇಶಭಕ್ತಿ, ತ್ಯಾಗ ಮತ್ತು ರಾಷ್ಟ್ರಕ್ಕೆ ನೀಡಿದ ನಿಸ್ವಾರ್ಥ ಸೇವೆಯ ಪರಂಪರೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ "ಎಂದು ಹೇಳಿದರು.

ಅದ್ಭುತ ವಿದ್ಯಾರ್ಥಿಯಾಗಿದ್ದ ನೇತಾಜಿ ಐಸಿಎಸ್ ಅನ್ನು ಹೇಗೆ ಭೇದಿಸಿದರು ಎಂಬುದನ್ನು ನೆನಪಿಸಿಕೊಂಡ ಕೇಂದ್ರ ಗೃಹ ಸಚಿವರು, ಅವರು ಕೆಲಸವನ್ನು ತೊರೆದು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಬ್ರಿಟಿಷರ ಅಡಿಯಲ್ಲಿ ಆರಾಮದಾಯಕ ಜೀವನಕ್ಕಿಂತ ದೇಶವೇ ತನಗೆ ಮುಖ್ಯ ಎಂಬ ಸಂದೇಶ ನೀಡಿದರು ಎಂದರು.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp