ಮೇವು ಹಗರಣ:  ಜಾರ್ಖಂಡ್ ಹೈಕೋರ್ಟ್ ನಿಂದ ಲಾಲು ಯಾದವ್ ಜಾಮೀನು ಅರ್ಜಿ ತಿರಸ್ಕೃತ

ಜೈಲಿನಲ್ಲಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಪ್ರಮುಖ ಹಿನ್ನಡೆಯಾಗಿದ್ದು ಮೇವು ಹಗರಣದ ಡುಮ್ಕಾ ಖಜಾನೆ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

Published: 19th February 2021 07:00 PM  |   Last Updated: 19th February 2021 07:00 PM   |  A+A-


Lalu Prasad Yadav suffering serious kidney damage

ಲಾಲೂಪ್ರಸಾದ್ ಯಾದವ್(ಸಂಗ್ರಹ ಚಿತ್ರ)

Posted By : Vishwanath S
Source : UNI

ರಾಂಚಿ: ಜೈಲಿನಲ್ಲಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಪ್ರಮುಖ ಹಿನ್ನಡೆಯಾಗಿದ್ದು ಮೇವು ಹಗರಣದ ಡುಮ್ಕಾ ಖಜಾನೆ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಲಾಲು ಯಾದವ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ಅಪ್ರೇಶ್ ಕುಮಾರ್ ಸಿಂಗ್ ತಿರಸ್ಕರಿಸಿದರು. ನ್ಯಾಯಾಲಯ ಯಾದವ್ ಗೆ ಜಾಮೀನು ನೀಡಿದ್ದರೆ ಜೈಲಿನಿಂದ ಹೊರಬರಲು ಸಾಧ್ಯವಾಗುತ್ತಿತ್ತು.

900 ಕೋಟಿ ರೂ.ಗಳ ಮೇವು ಹಗರಣದ ಮೂರು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಯಾದವ್ ಜಾಮೀನು ಪಡೆದಿದ್ದಾರೆ. ಆದರೆ ದುಮ್ಕಾ ಖಜಾನೆ ಪ್ರಕರಣದಲ್ಲಿ ಜಾಮೀನು ಸಿಕ್ಕಿಲ್ಲ. 

ಹೀಗಾಗಿ ಇನ್ನು ಎರಡು ತಿಂಗಳುಗಳ ಕಾಲ ಲಾಲೂ ಜೈಲಿನಲ್ಲಿಯೇ ಇರಬೇಕಾಗುತ್ತದೆ. ಅನಾರೋಗ್ಯ ಕಾರಣ ಲಾಲೂ ಜಾರ್ಖಂಡ್ ನ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಇತ್ತೀಚೆಗೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು.

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp