
ಗಣರಾಜ್ಯ ದಿನದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 200 ಮಂದಿಯ ಫೋಟೋ ಬಿಡುಗಡೆ
ನವದೆಹಲಿ: ಗಣರಾಜ್ಯದಿನದಂದು ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದವರ ಪೈಕಿ 200 ಮಂದಿಯ ಫೋಟೊಗಳನ್ನು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ವಿಡಿಯೋಗಳಿಂದ ಫೋಟೋಗಳನ್ನು ಸಂಗ್ರಹಿಸಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
"ಹಿಂಸಾಚಾರ ಎಸಗಿದವರ ಫೋಟೋಗಳನ್ನು ಬಹಿರಂಗಗೊಳಿಸಲಾಗಿದೆ ಅವರ ಗುರುತನ್ನು ಪತ್ತೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ 2020 ರ ನವೆಂಬರ್ ತಿಂಗಳಿನಿಂದಲೂ ಪ್ರತಿಭಟನೆ ನಡೆಸುತ್ತಿರುವ ರೈತರು ಜ.26 ರಂದು ಟ್ರ್ಯಾಕ್ಟರ್ ರ್ಯಾಲಿ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದರು. ಆದರೆ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರದಲ್ಲಿ ಅಂತ್ಯಗೊಂಡಿತ್ತು. ಪರಿಸ್ಥಿತಿಯ ಲಾಭವನ್ನು ಪಡೆದ ಕಿಡಿಗೇಡಿಗಳು ಕೆಂಪುಕೋಟೆಗೆ ನುಗ್ಗಿ ಧಾರ್ಮಿಕ ಧ್ವಜಗಳನ್ನು ಹಾರಿಸಿದ್ದರು.