ಮಹಾರಾಷ್ಟ್ರ ಜಿಲ್ಲೆಗಳಲ್ಲಿ ವಿದೇಶಿ ಕೋವಿಡ್-19 ತಳಿ ಪತ್ತೆಯಾಗಿಲ್ಲ: ಸರ್ಕಾರ
ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳು ವಿದೇಶಿ ಕೋವಿಡ್-19 ತಳಿಗಳ ಪ್ರಸರಣದ ಬಗ್ಗೆ ಆತಂಕ ಮೂಡಿಸಿತ್ತು. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.
Published: 20th February 2021 12:16 AM | Last Updated: 20th February 2021 12:40 PM | A+A A-

ಕೊರೋನಾ ಪ್ರಕರಣಗಳು
ಮುಂಬೈ: ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳು ವಿದೇಶಿ ಕೋವಿಡ್-19 ತಳಿಗಳ ಪ್ರಸರಣದ ಬಗ್ಗೆ ಆತಂಕ ಮೂಡಿಸಿತ್ತು. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.
ಅಮರಾವತಿ, ಯವತ್ಮಲ್, ಸತಾರಾ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದಲ್ಲಿ ವಿದೇಶಿ ತಳಿಯ ಕೋವಿಡ್-19 ವೈರಾಣು ಸೋಂಕು ಪತ್ತೆಯಾಗಿಲ್ಲ ಎಂದು ಹೇಳಿದೆ.
ಪಶ್ಚಿಮ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣ ತಡೆಗೆ ಮಹಾರಾಷ್ಟ್ರ ಸರ್ಕಾರ ವಾರಾಂತ್ಯ ಲಾಕ್ ಡೌನ್ ನ್ನು ಘೋಷಣೆ ಮಾಡಿದೆ ಹಾಗೂ ಕೊರೋನಾ ವೈರಸ್ ಮಾದರಿಗಳನ್ನು ಸಂಗ್ರಹಿಸಿ ನಡೆಸಲಾದ ಜಿನೋಮ್ ಸೀಕ್ವೆನ್ಸಿಂಗ್ ಬಳಿಕ ರಾಜ್ಯದಲ್ಲಿ ಯುನೈಟೆಡ್ ಕಿಂಗ್ಡಮ್, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ನಲ್ಲಿ ಪತ್ತೆಯಾಗಿರುವ ಕೊರೋನಾ ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಫೆ.18 ರಂದು ಮಹಾರಾಷ್ಟ್ರದಲ್ಲಿ 5000 ಕ್ಕೂ ಹೆಚ್ಚಿನ ಕೊರೋನಾ ಪ್ರಕರಣಗಳು ವರದಿಯಾಗಿದ್ದವು.