ಗೋದಾವರಿ-ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ: ಮೋದಿಗೆ ಪಳನಿಸ್ವಾಮಿ ಮನವಿ

ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಲಕ್ಷಾಂತರ ಜನರಿಗೆ ಅನುಕೂಲವಾಗುವಂತೆ ಗೋದಾವರಿ-ಕಾವೇರಿ ನದಿ ಸಂಪರ್ಕಿಸುವ ಯೋಜನೆಯನ್ನು “ರಾಷ್ಟ್ರೀಯ ಯೋಜನೆ” ಎಂದು ಘೋಷಿಸಿ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

Published: 21st February 2021 09:27 AM  |   Last Updated: 21st February 2021 09:27 AM   |  A+A-


TN CM Palaniswami

ಪಳನಿಸ್ವಾಮಿ

Posted By : Srinivasamurthy VN
Source : UNI

ಚೆನ್ನೈ: ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಲಕ್ಷಾಂತರ ಜನರಿಗೆ ಅನುಕೂಲವಾಗುವಂತೆ ಗೋದಾವರಿ-ಕಾವೇರಿ ನದಿ ಸಂಪರ್ಕಿಸುವ ಯೋಜನೆಯನ್ನು “ರಾಷ್ಟ್ರೀಯ ಯೋಜನೆ” ಎಂದು ಘೋಷಿಸಿ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ಎಲ್ಲಾ ಮುಖ್ಯಮಂತ್ರಿಗಳನ್ನು ಒಳಗೊಂಡ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ಮತ್ತು ಅದರ ಉಪನದಿಗಳನ್ನು "ನಮಾಮಿಗಂಗೆ" ಮಾದರಿಯಲ್ಲಿ ಪುನಶ್ಚೇತನಗೊಳಿಸಬೇಕಾಗಿದೆ ಎಂದು ಸಲಹೆ ನೀಡಿದರು.

ಶೀಘ್ರದಲ್ಲಿಯೇ ತಮಿಳುನಾಡಿಗೆ ಅನುಮತಿ ನೀಡುವಂತೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೇಂದ್ರವನ್ನು ಮನವಿ ಮಾಡಿದರು. ಫಲವತ್ತಾದ ಕೃಷಿ ಭೂಮಿಯನ್ನು ರಕ್ಷಿಸಲು ಮತ್ತು ಕಾವೇರಿ ಡೆಲ್ಟಾದಲ್ಲಿನ ರೈತರು ಮತ್ತು ಕೃಷಿ ಕಾರ್ಮಿಕರ ಜೀವನೋಪಾಯವನ್ನು ಕಾಪಾಡುವ ತಮಿಳುನಾಡು ಸಂರಕ್ಷಿತ ಕೃಷಿ ವಲಯ ಅಭಿವೃದ್ಧಿ ಕಾಯ್ದೆ ಒಂದು ಐತಿಹಾಸಿಕ ಕಾಯಿದೆಯಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ, 10 ಲಕ್ಷ ಹೆಕ್ಟೇರ್ ಒಣ ಭೂಮಿ 9.49 ಲಕ್ಷ ರೈತರಿಗೆ ಲಾಭವಾಗುತ್ತಿದೆ, 803 ಕೋಟಿ ರೂ. ವೆಚ್ಚದಲ್ಲಿ ರಾಗಿಗಳ ಅಡಿಯಲ್ಲಿ 34 ಪ್ರತಿಶತ ಮತ್ತು ಎಣ್ಣೆಕಾಳುಗಳ ಅಡಿಯಲ್ಲಿ ಶೇ.27 ರಷ್ಟು ಹೆಚ್ಚಳಕ್ಕೆ ಕಾರಣವಾಗಿದೆ ಎಂದರು. 
 

Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp