ಥಾಣೆಯ ಕಾರ್ಮಿಕರ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ: ಕಾರ್ಮಿಕ ಸಜೀವ ದಹನ
ಪೂರ್ವ ದೊಂಬಿವಿಲಿಯ ಮಂಡಪ ವ್ಯಾಪ್ತಿಯಲ್ಲಿನ ವಸತಿ ಸಂಕೀರ್ಣದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಕಟ್ಟಡದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿ ಓರ್ವ ವ್ಯಕ್ತಿ ಸಜೀವ ದಹನಗೊಂಡಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಸೇವೆ ಅಧಿಕಾರಿಗಳು ತಿಳಿಸಿದ್ದಾರೆ.
Published: 21st February 2021 03:12 PM | Last Updated: 21st February 2021 03:12 PM | A+A A-

ಸಾಂದರ್ಭಿಕ ಚಿತ್ರ
ಥಾಣೆ: ಪೂರ್ವ ದೊಂಬಿವಿಲಿಯ ಮಂಡಪ ವ್ಯಾಪ್ತಿಯಲ್ಲಿನ ವಸತಿ ಸಂಕೀರ್ಣದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಕಟ್ಟಡದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿ ಓರ್ವ ವ್ಯಕ್ತಿ ಸಜೀವ ದಹನಗೊಂಡಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಸೇವೆ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ 6.30 ರ ಸುಮಾರಿಗೆ ಸಂಭವಿಸಿದ ಬೆಂಕಿ ಅನಾಹುತದಿಂದ 120 ಮನೆಗಳು ಸಂಪೂರ್ಣ ಸುಟ್ಟುಹೋಗಿವೆ ಎಂದು ಅಗ್ನಿಶಾಮಕ ಅಧಿಕಾರಿ ನಾಮದೇವ್ ಚೌಧರಿ ತಿಳಿಸಿದ್ದಾರೆ.
ಮೂಲಗಳಂತೆ, ಅಡುಗೆ ಮಾಡುವ ಸಮಯದಲ್ಲಿ ಅನಿಲ ಸೋರಿಕೆ ಸಂಭವಿಸಿದ್ದು, ಇತರರ ಕೋಣೆಗಳಿಗೆ ವ್ಯಾಪಿಸಿದೆ. ಎರಡು ಅಗ್ನಿಶಾಮಕ ವಾಹನಗಳು ಎರಡು ಗಂಟೆಗಳ ಕಾಲ ಬೆಂಕಿಯನ್ನು ನಂದಿಸಲು ಹೋರಾಡಿವೆ.
ಶ್ರವಣದೋಷದ ಮೃತ ಕಾರ್ಮಿಕನಿಗೆ 25 ವರ್ಷ ವಯಸ್ಸಾಗಿತ್ತು. ಬೆಂಕಿಯಿಂದ ಮನೆಯಿಂದ ಹೊರಗೆ ಬರಲು ಸಾಧ್ಯವಾಗದೆ ಬೆಂಕಿಯಿಂದ ಸಾವನ್ನಪ್ಪಿದ್ದಾನೆ. ಗಾಯಗೊಂಡ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.