ರಕ್ಷಣಾ ಉತ್ಪಾದನೆಯ ಸಾಮರ್ಥ್ಯ ಹೆಚ್ಚಿಸಲು ಭಾರತ ಬದ್ಧ: ಪ್ರಧಾನಿ ನರೇಂದ್ರ ಮೋದಿ

ಶಸ್ತ್ರಾಸ್ತ್ರ, ಸೇನಾ ಉಪಕರಣಗಳ ತಯಾರಿಕೆಯಲ್ಲಿ ಭಾರತಕ್ಕೆ ಅತ್ಯಂತ ಪುರಾತನ ಅನುಭವದ ಹಿನ್ನೆಲೆ ಇತ್ತು. ಆದರೆ ಕಾರಣಾಂತರಗಳಿಂದ ಈ ಸಾಮರ್ಥ್ಯದ ಬಲವರ್ಧನೆಯಾಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Published: 22nd February 2021 02:14 PM  |   Last Updated: 22nd February 2021 04:15 PM   |  A+A-


PM Narendra Modi

ಪ್ರಧಾನಿ ನರೇಂದ್ರ ಮೋದಿ

Posted By : Srinivas Rao BV
Source : The New Indian Express

ನವದೆಹಲಿ: ಶಸ್ತ್ರಾಸ್ತ್ರ, ಸೇನಾ ಉಪಕರಣಗಳ ತಯಾರಿಕೆಯಲ್ಲಿ ಭಾರತಕ್ಕೆ ಅತ್ಯಂತ ಪುರಾತನ ಅನುಭವದ ಹಿನ್ನೆಲೆ ಇತ್ತು. ಆದರೆ ಕಾರಣಾಂತರಗಳಿಂದ ಈ ಸಾಮರ್ಥ್ಯದ ಬಲವರ್ಧನೆಯಾಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
 
ರಕ್ಷಣಾ ಕ್ಷೇತ್ರದಲ್ಲಿ ಕೇಂದ್ರ ಬಜೆಟ್ ನ ಅಂಶಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ವೆಬಿನಾರ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ತ್ವರಿತಗತಿಯಲ್ಲಿ ರಕ್ಷಣಾ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವುದಕ್ಕೆ ಭಾರತ ಸರ್ಕಾರ ಬದ್ಧವಾಗಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. 

ಸ್ವಾತಂತ್ರ್ಯಕ್ಕೂ ಮುನ್ನ ಭಾರತದಲ್ಲಿ  ಸೇನಾ ಉಪಕರಣಗಳನ್ನು ತಯಾರಿಸುವ ಕಾರ್ಖಾನೆಗಳಿದ್ದವು. ಎರಡೂ ವಿಶ್ವಯುದ್ಧದ ಸಂದರ್ಭದಲ್ಲಿ ಭಾರತದಿಂದ ಶಸ್ತ್ರಾಸ್ತ್ರಗಳು ಬೃಹತ್ ಪ್ರಮಾಣದಲ್ಲಿ ರಫ್ತಾಗಿತ್ತು. ಆದರೆ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಹಲವು ಕಾರಣಗಳಿಂದಾಗಿ ಈ ಸಾಮರ್ಥ್ಯವನ್ನು ವೃದ್ಧಿಸಲು ಸಾಧ್ಯವಾಗಲಿಲ್ಲ ಎಂದು ಮೋದಿ ಹೇಳಿದ್ದಾರೆ. 

"ಈಗ ಸಣ್ಣ ಶಸ್ತ್ರಾಸ್ತ್ರಗಳಿಗೂ ಭಾರತ ಬೇರೆ ದೇಶಗಳೆಡೆಗೆ ನೋಡುವ ಪರಿಸ್ಥಿತಿಯಲ್ಲಿದೆ, ಅತಿ ಹೆಚ್ಚು ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುತ್ತಿರುವ ರಾಷ್ಟ್ರಗಳ ಪೈಕಿ ಭಾರತ ಇದೆ. ಇದು ಹೆಮ್ಮೆಯ ವಿಷಯವಲ್ಲ ಎಂದು ಮೋದಿ ಹೇಳಿದ್ದಾರೆ. 

"ಭಾರತದಲ್ಲಿ ಪ್ರತಿಭೆ ಅಥವಾ ಸಾಮರ್ಥ್ಯದ ಕೊರತೆ ಇಲ್ಲ. ಕೊರೋನಾ ಅವಧಿಗೂ ಮುನ್ನ ಭಾರತ ಹೆಚ್ಚಿನ ಪ್ರಮಾಣದಲ್ಲಿ ವೆಂಟಿಲೇಟರ್ ಗಳನ್ನು ತಯಾರಿಸುತ್ತಿರಲಿಲ್ಲ ಆದರೆ ಈಗ ಸಾವಿರಾರು ವೆಂಟಿಲೇಟರ್ ಗಳನ್ನು ತಯಾರಿಸುತ್ತಿದೆ. ಮಂಗಳನ ಕಕ್ಷೆಯನ್ನು ತಲುಪಲು ಸಾಧ್ಯವಾದ ಭಾರತಕ್ಕೆ ಆಧುನಿಕ ಶಸ್ತ್ರಾಸ್ತ್ರಗಳನ್ನು ತಯಾರಿಸುವುದೂ ಸಾಧ್ಯವಿತ್ತು. ಆದರೆ ವಿದೇಶಗಳಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸುವುದು ಸುಲಭದ ಮಾರ್ಗವಾಯಿತು ಎಂದು ಮೋದಿ ಹೇಳಿದ್ದಾರೆ.
 
"ಆದರೆ ಈಗ ಭಾರತ ಪರಿಸ್ಥಿತಿಯನ್ನು ಬದಲಾವಣೆ ಮಾಡಲು ಶ್ರಮಿಸುತ್ತಿದೆ. ಸಾಮರ್ಥ್ಯವನ್ನು ಹೆಚ್ಚಿಸಲು ಬದ್ಧತೆ ಪ್ರದರ್ಶಿಸುತ್ತಿದೆ.  ಡಿಲೈಸೆನ್ಸಿಂಗ್, ಡಿರೆಗ್ಯುಲೇಷನ್, ರಫ್ತು ಉತ್ತೇಜನ, ವಿದೇಶಿ ಹೂಡಿಕೆ ಉದಾರೀಕರಣಗಳಂತಹ ಕ್ರಮಗಳು ರಕ್ಷಣಾ ಉತ್ಪಾದನಾ ಕ್ಷೇತ್ರವನ್ನು ಉತ್ತೇಜಿಸಲಿದೆ ಎಂದು ಮೋದಿ ಮಾಹಿತಿ ನೀಡಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp