
ಛಗನ್ ಭುಜ್ ಬಲ್
ಮುಂಬಯಿ: ಮಹಾರಾಷ್ಟ್ರ ಆಹಾರ ಮತ್ತು ನಾಗರಿಕ ಸಚಿವ ಛಗನ್ ಭುಜಬಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿ ಮನವಿ ಮಾಡುತ್ತಿದ್ದೇನೆ, ನನ್ನ ಆರೋಗ್ಯ ಸ್ಥಿರವಾಗಿದೆ.
ನಮ್ಮ ಎಲ್ಲಾ ನಾಗರಿಕರೂ ಕೊರೋನಾ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದು ಮರಾಠಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ