ಮತ್ತೆ ಒಕ್ಕರಿಸಿದ ಲಾಕ್ ಡೌನ್ ಭೂತ, ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್!

ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕದಿಂದಾಗಿ ಕಂಡು ಕೇಳರಿಯದ ರೀತಿಯಲ್ಲಿ ಲಾಕ್ ಡೌನ್ ಗೆ ತುತ್ತಾಗಿ ಹೈರಾಣಿಗಿದ್ದ ಭಾರತದಲ್ಲಿ ಇದೀಗ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದ್ದು, ಈಗಾಗಲೇ ಅಮರಾವತಿಯಲ್ಲಿ ಒಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ.

Published: 22nd February 2021 08:25 AM  |   Last Updated: 22nd February 2021 08:25 AM   |  A+A-


lockdown imposed in Amravati

ಲಾಕ್ ಡೌನ್ (ಸಾಂದರ್ಭಿಕ ಚಿತ್ರ)

Posted By : Srinivasamurthy VN
Source : Online Desk

ಮುಂಬೈ: ಮಾರಕ ಕೊರೋನಾ ಸೋಂಕು ಸಾಂಕ್ರಾಮಿಕದಿಂದಾಗಿ ಕಂಡು ಕೇಳರಿಯದ ರೀತಿಯಲ್ಲಿ ಲಾಕ್ ಡೌನ್ ಗೆ ತುತ್ತಾಗಿ ಹೈರಾಣಿಗಿದ್ದ ಭಾರತದಲ್ಲಿ ಇದೀಗ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದ್ದು, ಈಗಾಗಲೇ ಅಮರಾವತಿಯಲ್ಲಿ ಒಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ.

ಹೌದು.. ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಆ ರಾಜ್ಯ ಅಮರಾವತಿಯಲ್ಲಿ ಒಂದು ವಾರ್ ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ಸೋಮವಾರ ಅಂದರೆ ಇಂದು ಸಂಜೆಯಿಂದಲೇ ಲಾಕ್​ಡೌನ್​ ನಿಯಮ ಜಾರಿಗೆ ಬರಲಿದ್ದು.  ಮುಂದಿನ ಏಳು ದಿನ ಲಾಕ್ಡೌನ್​ ಜಾರಿಯಲ್ಲಿರಲಿದೆ. ಈ ವೇಳೆ ಕೇವಲ ಅಗತ್ಯ ಸೇವೆಗಳು ಮಾತ್ರ ಸಿಗಲಿವೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ ಸಚಿವೆ ಯಶೋಮತಿ ಠಾಕೂರ್, ಅಮರಾವತಿಯ ಅಚಲ್ ನಗರವನ್ನು ಹೊರತುಪಡಿಸಿ ಇನ್ನುಳಿದ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಈ ಸಮಯದಲ್ಲಿ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಈ ಹಿಂದೆಯೇ ಅಮರಾವತಿಯಲ್ಲಿ ವಾರಾಂತ್ಯದಲ್ಲಿ ಲಾಕ್ಡೌನ್ ಅನ್ನು ಜಿಲ್ಲಾಡಳಿತ ಘೋಷಿಸಿದ್ದು, ಶನಿವಾರ ರಾತ್ರಿ 8 ಗಂಟೆಯಿಂದ  ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ಗಂಟೆಯ ವರೆಗೆ ಲಾಕ್ ಡೌನ್  ಜಾರಿಗೆ ತಂದಿತ್ತು. ಆದರೂ ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಇದೀಗ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp