ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಸನ್ನಿಹಿತ, ಸರ್ಕಾರ ರಚನೆಗೆ ಹಕ್ಕು ಮಂಡಿಸದ ಬಿಜೆಪಿ

ಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ವಿಫಲವಾದ ಕಾಂಗ್ರೆಸ್ ಸರ್ಕಾರ ಸೋಮವಾರ ಪತನಗೊಂಡಿದ್ದು, ನೂತನ ಸರ್ಕಾರ ರಚೆನೆಗೆ ಹಕ್ಕು ಮಂಡಿಸದಿರಲು ಬಿಜೆಪಿ ನಿರ್ಧರಿಸಿದ...

Published: 22nd February 2021 06:52 PM  |   Last Updated: 22nd February 2021 07:36 PM   |  A+A-


bjp-pdh

ಪ್ರತಿಪಕ್ಷಗಳ ಶಾಸಕರು

Posted By : Lingaraj Badiger
Source : PTI

ಪುದುಚೇರಿ: ಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ವಿಫಲವಾದ ಕಾಂಗ್ರೆಸ್-ಡಿಎಂಕೆ ಸರ್ಕಾರ ಸೋಮವಾರ ಪತನಗೊಂಡಿದ್ದು, ನೂತನ ಸರ್ಕಾರ ರಚೆನೆಗೆ ಹಕ್ಕು ಮಂಡಿಸದಿರಲು ಬಿಜೆಪಿ ನಿರ್ಧರಿಸಿದ ಹಿನ್ನೆಲೆಯಲ್ಲಿ  ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವುದು ಬಹುತೇಕ ಖಚಿತವಾಗಿದೆ.

"ಈ ಹಂತದಲ್ಲಿ ನಾವು ಸರ್ಕಾರ ರಚಿಸಲು ಪ್ರಯತ್ನಿಸುವುದಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರ ಆಶೀರ್ವಾದ ಮತ್ತು ಮೋದಿ ಜಿ ಅವರ ನಾಯಕತ್ವದೊಂದಿಗೆ, ಮೇ ತಿಂಗಳಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸೇರಿ ಹೊಸ ಸರ್ಕಾರ ರಚಿಸಲಿದೆ. ಇದು ಪುದುಚೇರಿಯ ಜನರಿಗೆ ಉಜ್ವಲ ಭವಿಷ್ಯ ನಿರ್ಮಿಸುತ್ತದೆ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿ ಸ್ವಾಮಿನಾಥನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭೆ ಅವಧಿ ಮುಕ್ತಾಯದ ಸಂದರ್ಭದಲ್ಲಿ ಸರ್ಕಾರ ಪತನವಾಗಿರುವುದು ಕೇಂದ್ರಾಡಳಿತ ಪ್ರದೇಶದ ಇತಿಹಾಸದಲ್ಲೇ “ಕೆಟ್ಟ ಅಧ್ಯಾಯ” ಎಂದು ಬಿಜೆಪಿ ಹೇಳಿದೆ.

ಕಾಂಗ್ರೆಸ್ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಪುದುಚೇರಿಯನ್ನು "ಲೂಟಿ ಮಾಡಿದೆ" ಮತ್ತು ಉದ್ಯೋಗ, ಪಡಿತರ, ಆರೋಗ್ಯ ರಕ್ಷಣೆ, ರಸ್ತೆ ಹಾಗೂ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ನೀಡಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಸ್ವಾಮಿನಾಥನ್ ಅವರು ಆರೋಪಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ವಿಫಲವಾದ ವಿ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp